ಮಡಿಕೇರಿ ಡಿ.19 : ಕರ್ನಾಟಕ ವಿಧಾನ ಪರಿಷತ್ ನ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 2012 ರಿಂದ ಇಲ್ಲಿಯವರೆಗೆ ಗೆಲುವು ಸಾಧಿಸುತ್ತಾ ಬಂದಿರುವ ವಿಧಾನ ಪರಿಷತ್ ಸದಸ್ಯರುಗಳಿಂದ ಶಿಕ್ಷಕರ ಹಾಗೂ ಸರ್ಕಾರಿ ನೌಕರರ ಸಮಸ್ಯೆಗಳು ಉಲ್ಬಣಿಸುತ್ತಾ ಬಂದಿವೆ ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಟೀಕಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿಕ್ಷಕರ ಸಮಸ್ಯೆಗಳ ಬಗ್ಗೆ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಮಾತ್ರ ಅರಿವಿರುತ್ತದೆ. ನಾನು ಒಬ್ಬ ಶಿಕ್ಷಕನಾಗಿ ಸೇವೆ ಸಲ್ಲಿಸಿರುವುದರಿಂದ ಇಲ್ಲಿನ ಆಗುಹೋಗುಗಳ ಬಗ್ಗೆ ತಿಳಿದಿದೆ. ಅಲ್ಲದೆ ಆಡಳಿತ ಪಕ್ಷದ ಅಭ್ಯರ್ಥಿಯಾಗಿರುವುದರಿಂದ ನನ್ನ ಗೆಲುವಿನಿಂದ ಶಿಕ್ಷಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯಲಿದೆ ಎಂದರು.
2006 ಮತ್ತು 2012 ರಲ್ಲಿ ಗೆಲುವು ಸಾಧಿಸಿದ ಬಿಜೆಪಿ ಎಂಎಲ್‍ಸಿ ಹಾಗೂ 2018 ರಲ್ಲಿ ವಿಧಾನ ಪರಿಷತ್ ಪ್ರವೇಶಿಸಿದ ಜೆಡಿಎಸ್ ಎಂಎಲ್‍ಸಿ ಯಿಂದ ಶಿಕ್ಷಕರಿಗೆ ನ್ಯಾಯ ದೊರಕಿಸಿಕೊಡಲು ಸಾಧ್ಯವಾಗಿಲ್ಲ. ಇವರುಗಳಿಂದ ಶಿಕ್ಷಕರ ಕ್ಷೇತ್ರಕ್ಕೆ ದೊಡ್ಡ ನಷ್ಟವೇ ಉಂಟಾಗಿದೆ, ಸಮಸ್ಯೆಗಳು ಕ್ಯಾನ್ಸರ್ ಆಗಿ ಮಾರ್ಪಟ್ಟಿವೆ. ಇವುಗಳನ್ನು ಬಗೆಹರಿಸಲು ಆಡಳಿತ ಪಕ್ಷದ ಅಭ್ಯರ್ಥಿಯ ಗೆಲುವು ಅನಿವಾರ್ಯವಾಗಿದೆ, ಆದ್ದರಿಂದ ಈ ಬಾರಿ ಮತದಾರರು ನನ್ನ ಕೈಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಶಿಕ್ಷಕರ ಪರವಾದ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವುದಾಗಿ ಹೇಳಿದರು.
::: ಅಣ್ಣ ತಮ್ಮಂದಿರು :::
ಬಿಜೆಪಿ ಮತ್ತು ಜೆಡಿಎಸ್ ಅಣ್ಣ ತಮ್ಮಂದಿರಿದ್ದಂತೆ, ಇದೇ ಕಾರಣಕ್ಕೆ ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಸಂವಿಧಾನಕ್ಕೆ ವಿರುದ್ಧವಾಗಿ ಸುಳ್ಳು ಮತ್ತು ಅಪಪ್ರಚಾರ ಮಾಡುವುದೇ ಈ ಎರಡು ಪಕ್ಷಗಳ ಕಾರ್ಯವಾಗಿದೆ ಎಂದು ಮಂಜುನಾಥ್ ಕುಮಾರ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ಹಾಗೂ ಮೈಸೂರು ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಪಿ.ಎಂ.ರಾಮು ಉಪಸ್ಥಿತರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*