ಕಡಂಗ ಡಿ.19 : ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ನಡೆಯಿತು.
ಕಾರ್ಯಕ್ರಮವನ್ನು ಬೇಂಗೂರು ಗ್ರಾ.ಪಂ ಸದಸ್ಯ ಕೆ.ಎಂ.ಬಶೀರ್ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಕೆಪಿಸಿಸಿ ಸದಸ್ಯ ಬಿ.ಎಸ್.ರಮಾನಾಥ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಜೀವನದಲ್ಲಿ ಕ್ರೀಡೆಯಿಂದ ದೊರೆಯುವ ಪ್ರಯೋಜನದ ಬಗ್ಗೆ ತಿಳಿಸಿದರು.
ಸಂಸ್ಥೆಯ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು , ಶಿಕ್ಷಕರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಪರಮೇಶ್ ಸ್ವಾಗತಿಸಿ, ರಮೇಶ್ ವಂದಿಸಿದರು. ದೈಹಿಕ ಶಿಕ್ಷಕ ಅಯ್ಯಪ್ಪ ವಿದ್ಯಾರ್ಥಿಗಳ ತಂಡವನ್ನು ಮುನ್ನಡೆಸಿದ್ದರು.
ವರದಿ : ನೌಫಲ್ ಕಡಂಗ









