ಕೊಂಡಂಗೇರಿ ಡಿ.19 : ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ(ಎಸ್ ವೈ ಎಸ್)ದ 30ನೇ ವಾರ್ಷಿಕ ಮಹಾ ಸಮ್ಮೇಳನದ ಭಾಗವಾಗಿ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಕೊಂಡಂಗೇರಿಯಲ್ಲಿ “ಉಲಮಾ ಸಂಗಮ” ಕಾರ್ಯಕ್ರಮ ನಡೆಯಿತು.
ಜ.24 ರಂದು ಮಂಗಳೂರಿನ ಅಡ್ಯಾರ್ನಲ್ಲಿ ನಡೆಯಲಿರು ಬೃಹತ್ ಸಮಾವೇಶದ ಪ್ರಚಾರಾರ್ಥ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ “ಉಲಮಾ ಸಂಗಮ”ವು ಕೊಡಗು ಜಿಲ್ಲೆಯಲ್ಲಿ ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್ ಕೊಳಕೇರಿಯವರ ಅಧ್ಯಕ್ಷತೆಯಲ್ಲಿ ಕೊಂಡಂಗೇರಿಯ ಶಾದಿ ಮಹಲ್ ನಲ್ಲಿ ನಡೆಯಿತು.
ಕೂರ್ಗ್ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಎಸ್ವೈಎಸ್ ರಾಜ್ಯಾಧ್ಯಕ್ಷ ಅಬ್ದುಲ್ ಹಫೀಳ್ ಸಅದಿ ಪ್ರಸ್ತಾವಿಕ ಭಾಷಣ ಮಾಡಿದರು. ವಿಪಿಎ ದಾರಿಮಿ ತಂಙ್ಞಳ್, ಆಟೀರಿ(ಕೇರಳ) ತರಗತಿ ನಡೆಸಿದರು.
ಎಸ್ವೈಎಸ್ ಪ್ರಧಾನ ಕಾರ್ಯದರ್ಶಿ ಅಹ್ಮದ್ ಮುಸ್ಲಿಯಾರ್ ಸ್ವಾಗತಿಸಿದರು. ಅಬ್ದುಲ್ ಅಝೀಝ್ ಸಖಾಫಿ ವಂದಿಸಿದರು.