ಮಡಿಕೇರಿ ಡಿ.19 : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಆನ್‍ಲೈನ್ ಪೋರ್ಟಲ್ ನಲ್ಲಿ ನೂತನವಾಗಿ ನೋಂದಣಿಗೊಂಡಿರುವ ಹೋಂ-ಸ್ಟೇಗಳಿಗೆ ಶಾಸಕ ಡಾ.ಮಂತರ್ ಗೌಡ ಕುಶಾಲನಗರದ ಶಾಸಕರ ಕಚೇರಿಯಲ್ಲಿ ಪ್ರಮಾಣ ಪತ್ರ ವಿತರಿಸಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಣಿಗೊಳ್ಳುವುದರ ಮುಖಾಂತರ ಉತ್ತಮ ಆದಾಯ ಗಳಿಸಲು ಮತ್ತು ಸುಸ್ಥಿರ ಮತ್ತು ಜವಾಬ್ದಾರಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೋರಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇ, ಹೋಟೆಲ್ ಮತ್ತು ರೆಸಾರ್ಟ್‍ಗಳು ಕೂಡ ನಿಯಮಗಳನ್ನು ಪಾಲಿಸಿ ಪ್ರವಾಸೋದ್ಯಮ ಇಲಾಖೆಯ ಕೆ.ಟಿ.ಟಿ.ಎಫ್ ಆನ್‍ಲೈನ್ ಪೋರ್ಟಲ್ ನಲ್ಲಿ ನೋಂದಾಯಿಸಿಗೊಳ್ಳುವಂತೆ ಕರೆ ನೀಡಿದರು.
ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಅನಿತಾ ಭಾಸ್ಕರ್ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರಾದ ಜತೀನ್ ಬೋಪಣ್ಣ ಇತರರು ಉಪಸ್ಥಿತರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*