ವಿರಾಜಪೇಟೆ ಡಿ.20 : ತಾಲೂಕಿನ ಗಡಿಭಾಗದಲ್ಲಿರುವ ಮಲೆಯಾಳಂ ಶಾಲೆಯಾದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿರಾಜಪೇಟೆ ತಾಲೂಕಿನ ಕ್ಲಸ್ಟರ್ ಮಟ್ಟದ ಸಮಾಲೋಚನಾ ಸಭೆ ನಡೆಯಿತು.
ಗಡಿಭಾಗದಲ್ಲಿರುವ ಮಲೆಯಾಳ ಶಾಲೆಯಲ್ಲಿ ಇದೆ ಮೊದಲ ಬಾರಿಗೆ ಸಭೆ ನಡೆಸಲಾಯಿತು.
ಸಭೆಯಲ್ಲಿ ವಿರಾಜಪೇಟೆ ಮತ್ತು ಕಲ್ತೋಡು ಕ್ಲಸ್ಟರ್‍ನ ಶಿಕ್ಷಕರು ಆಗಮಿಸಿದ್ದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಬಿಆರ್‍ಪಿ ಕೆ.ಸಿ. ಗೀತಾಂಜಲಿ ಸಭೆಯನ್ನುದ್ದೇಶಿಸಿ ಮಾತನಾಡಿ, ಮಕ್ಕಳ ಕಲಿಕೆ ಹಾಗೂ ಪ್ರಗತಿಯ ಬಗ್ಗೆ ತಿಳಿಸಿದರು.

ಕಲ್ತೋಡ್ ಕ್ಲಸ್ಟರ್‍ನ ಸಿಆರ್‍ಪಿ ವಿ.ಟಿ. ವೆಂಕಟೇಶ್ ಹಾಗೂ ಅರಣ್ಯ ಇಲಾಖೆಯ ಸಂಪತ್ ಕುಮಾರ್ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಪ್ರಾಥಮಿಕ ಶಾಲೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಎ.ವಿ. ಮಂಜುನಾಥ್ ವಹಿಸಿ ಮಾತನಾಡಿ, ಮಲೆಯಾಳಂ ಶಾಲೆ ನಡೆದುಬಂದ ಹಾದಿ ಸೇರಿದಂತೆ ಇನ್ನಿತರ ವಿಚಾರಗಳನ್ನು ತಿಳಿಸಿದರು.
ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕರಾದ ಸಜೇಶ್ ಕುಮಾರ್ ಸೇರಿದಂತೆ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಜರಿದ್ದರು.










