ಮಡಿಕೇರಿ ಡಿ.20 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯರ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಕೃಷಿಯೇತರ ಮತ್ತು ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ಆದಾಯ ತೆರಿಗೆ, ಜಿಎಸ್‍ಟಿ ಮತ್ತು ಸಹಕಾರ ಸಂಘಗಳ ಆಡಳಿತ ನಿರ್ವಹಣೆ ಕುರಿತು ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮವು ಡಿಸೆಂಬರ್, 26 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಯೂರ ವ್ಯಾಲಿ ವ್ಯೂ ಹೋಟೆಲ್‍ನಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕರಾದ ಜಯಕರಶೆಟ್ಟಿ ಬಿ. ಇಂದ್ರಾಳಿ ಅವರು ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕರಾದ ಎ.ಕೆ.ಮನುಮುತ್ತಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಬಿ.ಸಿ.ಲೋಕಪ್ಪಗೌಡ, ಕೊಡಗು ಜಿಲ್ಲಾ ಸಹಕಾರ ಯೂನಿಯರ್ ಉಪಾಧ್ಯಕ್ಷರಾದ ಪಿ.ಸಿ.ಮನು ರಾಮಚಂದ್ರ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕರು ಇತರರು ಪಾಲ್ಗೊಳ್ಳಲಿದ್ದಾರೆ.








