Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ನಲ್ಲಿ ಮೋಟರ್ ಮೋಬ್-2023ಕ್ಕೆ ಚಾಲನೆ : ಅಟೋಮೊಬೈಲ್ ಕ್ಷೇತ್ರದಲ್ಲಿ ವ್ಯಾಪಕ ಬದಲಾವಣೆ, ರೊಬೊಟಿಕ್ಸ್ ತಂತ್ರಜ್ಞಾನದಿಂದ ಹೊಸತನ : ಬಲರಾಮ ಆಚಾರ್ಯ.ಜಿ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ನಲ್ಲಿ ಮೋಟರ್ ಮೋಬ್-2023ಕ್ಕೆ ಚಾಲನೆ : ಅಟೋಮೊಬೈಲ್ ಕ್ಷೇತ್ರದಲ್ಲಿ ವ್ಯಾಪಕ ಬದಲಾವಣೆ, ರೊಬೊಟಿಕ್ಸ್ ತಂತ್ರಜ್ಞಾನದಿಂದ ಹೊಸತನ : ಬಲರಾಮ ಆಚಾರ್ಯ.ಜಿ*

ಡಿಸೆಂಬರ್ 20, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಪುತ್ತೂರು ಡಿ.20 : ಕಳೆದೊಂದು ದಶಕದಿಂದ ಅಟೋಮೊಬೈಲ್ ಕ್ಷೇತ್ರದಲ್ಲಿ ವ್ಯಾಪಕ ಬದಲಾವಣೆಯಾಗುತ್ತಿದ್ದು, ಕೃತಕ ಬುದ್ದಿಮತ್ತೆ ಹಾಗೂ ರೊಬೊಟಿಕ್ಸ್ ತಂತ್ರಜ್ಞಾನದ ಅಳವಡಿಕೆಯಿಂದ ಸಾಕಷ್ಟು ಹೊಸತನ ಕಂಡುಬರುತ್ತಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರು ಹಾಗೂ ಖ್ಯಾತ ಸ್ವರ್ಣೋದ್ಯಮಿಗಳೂ ಆದ ಬಲರಾಮ ಆಚಾರ್ಯ.ಜಿ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಹೊಸ ಹಾಗೂ ಹಳೆಯ ಕಾರುಗಳ ಹಾಗೂ ದ್ವಿಚಕ್ರ ವಾಹನಗಳ ಪ್ರದರ್ಶನ ಮೋಟರ್ ಮೋಬ್-2023ಕ್ಕೆ ಚಾಲನೆ ನೀಡಿ ಮಾತಾಡಿದರು. ಶೇ. 90 ಜನ ಪ್ರಯಾಣಕ್ಕೆ ಹಾಗೂ ಸಾಗಾಟಕ್ಕೆ ವಾಹನಗಳನ್ನು ಬಳಸಿಕೊಳ್ಳುತ್ತಾರೆ. ಶೇ. 10 ಜನರಿಗೆ ವಾಹನಗಳನ್ನು ಹೊಂದುವುದು ಒಂದು ಹವ್ಯಾಸ ಎಂದರು. ಇಂತಹ ಪ್ರದರ್ಶನವು ಪುತ್ತೂರಿಗೆ ಹೊಸತು ಎಂದು ನುಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ವಾಹನವನ್ನು ಓಡಿಸುವ ಸಂದರ್ಭದಲ್ಲಿ ನನ್ನಂತೆ ಇತರರೂ ರಸ್ತೆಯಲ್ಲಿ ವಾಹನವನ್ನು ಓಡಿಸುತ್ತಿದ್ದಾರೆ ಎನ್ನುವ ಅರಿವು ಪ್ರತಿಯೊಬ್ಬ ಚಾಲಕನಲ್ಲಿರಬೇಕು ಹಾಗೂ ರಸ್ತೆ ನಿಯಮಗಳ ಮತ್ತು ಸುರಕ್ಷತೆಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಟಿ.ಎಸ್.ಸುಬ್ರಮಣ್ಯ ಭಟ್ ಮಾತನಾಡಿ ಕಳೆದ ಮೂರು ದಶಕಗಳಿಂದ ವಾಹನಗಳಲ್ಲಿ ಆಮೂಲಾಗ್ರ ಬದಲಾವಣೆಯಾಗುತ್ತಿದ್ದು ಈ ಬದಲಾವಣೆಯ ಬಗ್ಗೆ ಯುವಜನತೆಗೆ ಅರಿವು ಮೂಡಿಸುವ ಪ್ರಯತ್ನ ಇದಾಗಿದೆ ಎಂದರು. ವಿದ್ಯಾರ್ಥಿಗಳೂ ಕೂಡಾ ಹೊಸತನ್ನು ಆವಿಷ್ಕರಿಸಿ ಸಮಾಜದ ಒಳಿತಿಗೆ ನೀಡಬೇಕು ಎಂದರು. ವಾಹನವನ್ನು ಚಲಾಯಿಸುವ ಸಂದರ್ಭದಲ್ಲಿ ಹೆತ್ತವರು ಹಾಗೂ ಇತರರು ನಮ್ಮ ಬರುವಿಕೆಗೆ ಕಾಯುತ್ತಿರುತ್ತಾರೆ ಎನ್ನುವ ಯೋಚನೆ ಮನದಲ್ಲಿರಬೇಕು ಎಂದರು.
ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ ನಿರ್ದೇಶಕರಾದ ರವಿಕೃಷ್ಣ.ಡಿ.ಕಲ್ಲಾಜೆ, ಸತ್ಯನಾರಾಯಣ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಬೈಕ್ ಹಾಗೂ ಕಾರುಗಳ ರ‍್ಯಾಲಿ ಹಾಗೂ ನುರಿತ ಚಾಲಕರಿಂದ ಸ್ಟಂಟ್ ಪ್ರದರ್ಶನ ನಡೆಯಿತು.
ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ ಸ್ವಾಗತಿಸಿ, ಪ್ರೊ.ಹರೀಶ್.ಎಸ್.ಆರ್ ವಂದಿಸಿದರು. ವಿದ್ಯಾರ್ಥಿನಿ ರಚನಾ.ಎಂ ಕಾರ್ಯಕ್ರಮ ನಿರ್ವಹಿಸಿದರು.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಅಂಬೇಕಲ್ ಜೀವನ್ ಆಯ್ಕೆ*
Next Article *ಸೋಮವಾರಪೇಟೆ : ಮಳಿಗೆಗಳ ಹರಾಜು ಪ್ರಕ್ರಿಯೆ ಮುಂದೂಡಿಕೆ*

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

ಮಡಿಕೇರಿ, NEWS DESK ಮಾ.03: ಜಿಲ್ಲಾ ಪೊಲೀಸ್ ಘಟಕದಲ್ಲಿ ಅಪರಾಧ ಪತ್ತೆ, ಸ್ಫೋಟಕ, ಮಾದಕ ದ್ರವ್ಯ ಪತ್ತೆಯ ಸಮಯದಲ್ಲಿ ತರಬೇತು…

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.