ಮಡಿಕೇರಿ ಡಿ.20 : ಕರ್ನಾಟಕ ಸ್ಪೋರ್ಟ್ಸ್ ಅಸೋಷಿಯೇಷನ್ ಹಾಗೂ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಡ್ಯಾನ್ಸ್ ಫೆಡರೇಷನ್ ಆಶ್ರಯದಲ್ಲಿ ಮೈಸೂರಿನ ಶಾರದಾ ವಿಲಾಸ ಕಾಲೇಜು ಸಭಾಂಗಣದಲ್ಲಿ ನಡೆದ ವಲಯ ಮಟ್ಟದ ಸ್ಪೋರ್ಟ್ಸ್ ಡ್ಯಾನ್ಸ್ ಚಾಂಪಿಯನ್ ಶಿಪ್ ನಲ್ಲಿ ವಿರಾಜಪೇಟೆಯ ಹೆಗ್ಗಳ ಗ್ರಾಮದ ಪಿ.ಎ.ಇಶಾನಿ ಎರಡು ಪದಕ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಎಸ್. ಎಂ. ಎಸ್ ಅರಮೇರಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಇಶಾನಿ ವಿರಾಜಪೇಟೆಯ ಹೆಗ್ಗಳ ಗ್ರಾಮದ ಪಡಂಬೈಲು ಅನಿಲ್ ಮತ್ತು ತೀರ್ಥ ದಂಪತಿಗಳ ಪುತ್ರಿ. ಈಕೆ ವಿದುಷಿ ಹೇಮಾವತಿ ಕಾಂತರಾಜ್ ಅವರ ಬಳಿ ತರಬೇತಿ ಪಡೆಯುತ್ತಿದ್ದಾಳೆ.












