Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವೃತ್ತಿ ಕೌಶಲ್ಯ ತರಬೇತಿ ಶಿಬಿರ ಸಮಾರೋಪ : ಕಾರಾಗೃಹ ಬಂಧಿಗಳು ಉತ್ತಮ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಿ : ಸೆಷನ್ ನ್ಯಾಯಾಧೀಶ ಶಾಮ್ ಪ್ರಸಾದ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವೃತ್ತಿ ಕೌಶಲ್ಯ ತರಬೇತಿ ಶಿಬಿರ ಸಮಾರೋಪ : ಕಾರಾಗೃಹ ಬಂಧಿಗಳು ಉತ್ತಮ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಿ : ಸೆಷನ್ ನ್ಯಾಯಾಧೀಶ ಶಾಮ್ ಪ್ರಸಾದ್ ಕರೆ*

ಡಿಸೆಂಬರ್ 20, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.20 : ಜಿಲ್ಲಾ ಕಾರಾಗೃಹದಲ್ಲಿನ ಬಂಧಿಗಳು ಮುಂದಿನ ದಿನಗಳಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಎಚ್.ಸಿ.ಶಾಮ್ ಪ್ರಸಾದ್ ಅವರು ಕರೆ ನೀಡಿದ್ದಾರೆ.
ನಗರದ ಹೊರ ವಲಯದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿನ 50 ಬಂಧಿಗಳಿಗೆ ನಬಾರ್ಡ್, ಒಡಿಪಿ ಹಾಗೂ ಜಿಲ್ಲಾ ಕಾರಾಗೃಹ ವತಿಯಿಂದ ಒಂದು ತಿಂಗಳ ಕಾಲ ಎಲೆಕ್ಟ್ರೀಷಿಯನ್ ಮತ್ತು ಪ್ಲಂಬಿಂಗ್ ಸಂಬಂಧ ಏರ್ಪಡಿಸಲಾಗಿದ್ದ ‘ವೃತ್ತಿ ಕೌಶಲ್ಯ ತರಬೇತಿ’ ಕಾರ್ಯಾಕ್ರಮದ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.
ನಬಾರ್ಡ್ ವತಿಯಿಂದ ಏರ್ಪಡಿಸಲಾಗಿದ್ದ ವೃತ್ತಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವು ಬಹು ಉಪಯುಕ್ತವಾಗಿದ್ದು, ಕಾರಾಗೃಹ ಬಂಧಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ ಎಂದರು.
ನಬಾರ್ಡ್‍ನ ಮಹಾ ಪ್ರಬಂಧಕರಾದ ಡಾ.ಕೆ.ಎಸ್.ಮಹೇಶ್ ಅವರು ಮಾತನಾಡಿ ವೃತ್ತಿ ಕೌಶಲ್ಯ ತರಬೇತಿ ಪಡೆಯುವುದರಿಂದ ಸ್ವ ಉದ್ಯೋಗ ಕೈಗೊಳ್ಳಲು ಸಾಧ್ಯವಾಗಲಿದೆ. ಆ ನಿಟ್ಟಿನಲ್ಲಿ ಕಾರಾಗೃಹ ಬಂಧಿಗಳು ಮುಂದಿನ ದಿನಗಳಲ್ಲಿ ಉತ್ತಮ ಜೀವನ ನಡೆಸುವತ್ತ ಗಮನಹರಿಸಬೇಕು ಎಂದು ಅವರು ಸಲಹೆ ಮಾಡಿದರು.
ನಬಾರ್ಡ್ ಸಂಸ್ಥೆಯು ಕಳೆದ 40 ವರ್ಷಗಳಿಂದ ಕೃಷಿ, ತೋಟಗಾರಿಕೆ, ಪಶುಪಾಲನೆ, ಜಲಾನಯನಕ್ಕೆ ಒತ್ತು ನೀಡುವುದು, ಜೊತೆಗೆ ಮಹಿಳಾ ಸಬಲೀಕರಣ, ಬುಡಕಟ್ಟು ಜನರ ಶ್ರೇಯೋಭಿವೃದ್ಧಿಗೆ ಗಮನ ಹರಿಸುವುದು, ಹೀಗೆ ಕಾರ್ಯಗಳನ್ನು ಹಮ್ಮಿಕೊಂಡಿದೆ ಎಂದು ಡಾ.ಕೆ.ಎಸ್.ಮಹೇಶ್ ಅವರು ತಿಳಿಸಿದರು.
ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ಮಾತನಾಡಿ ಮಡಿಕೇರಿಯ ಕಾರಾಗೃಹದಲ್ಲಿ ಇದೇ ಮೊದಲ ಬಾರಿಗೆ ಕಾರಾಗೃಹ ಬಂಧಿಗಳಿಗೆ ವೃತ್ತಿ ಕೌಶಲ್ಯ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಕಾರ್ಯವಾಗಿದೆ. ಕಾರಾಗೃಹ ಬಂಧಿಗಳು ಸ್ವ ಉದ್ಯೋಗ ಪಡೆದು ಸ್ವಾವಲಂಬಿಗಳಾಗಿ ಇತರರಂತೆ ಬದುಕು ನಡೆಸುವಂತಾಗಬೇಕು ಎಂದು ಸಲಹೆ ಮಾಡಿದರು.
‘ನಬಾರ್ಡ್ ಜಿಲ್ಲಾ ವ್ಯವಸ್ಥಾಪಕರಾದ ವಿ.ರಮೇಶ್ ಬಾಬು ಅವರು ಮಾತನಾಡಿ ಕಾರಾಗೃಹವು ಶಿಕ್ಷೆ ನೀಡುವ ತಾಣವಲ್ಲ. ಬದಲಿಗೆ ಪರಿವರ್ತನೆಗೊಳ್ಳುವ ಸ್ಥಳ ಎಂದರೆ ತಪ್ಪಾಗಲಾರದು ಎಂದು ಅವರು ಹೇಳಿದರು.’
ಕಾರಾಗೃಹ ಬಂಧಿಗಳು ಜೈಲಿನಿಂದ ಬಿಡುಗಡೆಯಾದ ನಂತರ ಎಲೆಕ್ಟ್ರೀಷಿಯನ್ ಮತ್ತು ಪ್ಲಂಬಿಂಗ್ ವೃತ್ತಿ ಕೌಶಲ್ಯ ತರಬೇತಿಯ ಸಹಕಾರದಿಂದ ಸ್ವದ್ಯೋಗ ಕೈಗೊಳ್ಳಲು ಸಹಕಾರಿಯಾಗಿದೆ ಎಂದರು.
ನಬಾರ್ಡ್ ವತಿಯಿಂದ 50 ತರಬೇತಿದಾರರಿಗೆ ಟೂಲ್ ಕಿಟ್ ವಿತರಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ ನಾಯ್ಕ್, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಾದ ಉಮಾಕಾಂತ್, ಕೆನರಾ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥರಾದ ರಾಜೇಶ್ ಕುಮಾರ್, ಎಸ್‍ಬಿಐನ ಪ್ರಾದೇಶಿಕ ಮುಖ್ಯಸ್ಥರಾದ ಶ್ರೀಜಿತ್, ಓಡಿಪಿ ಸಂಸ್ಥೆಯ ನಿರ್ದೇಶಕರಾದ ಫಾದರ್ ಅಲೆಕ್ಸ್ ಪ್ರಶಾಂತ್ ಸಿಕ್ವೇರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ಇತರರು ಇದ್ದರು.


::: ಮಹಾ ಪ್ರಬಂಧಕರ ಭೇಟಿ :::
ನಬಾರ್ಡ್‍ನ ಮಹಾ ಪ್ರಬಂಧಕರಾದ ಡಾ.ಕೆ.ಎಸ್.ಮಹೇಶ್ ಅವರು ಇತ್ತೀಚೆಗೆ ನಗರದ ಡಿಸಿಸಿ ಬ್ಯಾಂಕ್‍ಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು.
ನಂತರ ಅಪ್ಪಂಗಳದ ಸಾಂಬಾರ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಅಂಕೇಗೌಡ ಅವರು ಇದ್ದರು.
ಬಳಿಕ ನಾಪೋಕ್ಲು ಮತ್ತು ವಿರಾಜಪೇಟೆ ರೈತ ಉತ್ಪಾದಕರ ಸಂಸ್ಥೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು. ಕಾಫಿ ಬೆಳೆ ಸಂಬಂಧ ವಾಣಿಜ್ಯ ಅಭಿವೃದ್ಧಿ ಬಗ್ಗೆ ಚರ್ಚಿಸಿದರು.
ನಂತರ ನಂಜರಾಯಪಟ್ಟಣದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಭೇಟಿ ನೀಡಿ ನಬಾರ್ಡ್‍ನ ಗೋದಾಮು ಪರಿಶೀಲಿಸಿದರು. ಬಳಿಕ ಬಾಳೆಗುಂಡಿಯ ಹಾಡಿಗೆ ಭೇಟಿ ನೀಡಿ ಟಿಡಿಎಫ್ ನಾನ್‍ವಾಡಿ ಯೋಜನೆಯನ್ನು ಪರಿಶೀಲಿಸಿದರು. ಬಾಳೆಗುಂಡಿಯ 20 ಆದಿವಾಸಿ ಕುಟುಂಬಗಳಿಗೆ ಕೋಳಿ ಮರಿ ವಿತರಿಸಿದರು.
ಬಳಿಕ ಚಿಕ್ಕಳುವಾರದಲ್ಲಿನ ಕೊಡಗು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಕುಲಪತಿ ಅಶೋಕ್ ಎಸ್.ಆಲೂರ ಇದ್ದರು.
ನಗರದ ಕೂಡಿಗೆಯ ಗ್ರಾಮೀಣ ಸ್ವ ಉದ್ಯೋಗ ತರಭೇತಿ ಕೇಂದ್ರಕ್ಕೆ ಭೇಟಿ ನೀಡಿ ಕುಡಿಯುವ ನೀರು ಘಟಕ ಉದ್ಘಾಟಿಸಿದರು. ಕಂಪ್ಯೂಟರ್, ಪ್ರೋಜೆಕ್ಟರ್ ಮತ್ತು ಜೆರಾಕ್ಸ್ ಯಂತ್ರ ವಿತರಿಸಿದರು. ನಬಾರ್ಡ್‍ನ ಜಿಲ್ಲಾ ವ್ಯವಸ್ಥಾಪಕರಾದ ರಮೇಶ್ ಬಾಬು ಇದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು NEWS DESK ಮಾ.10: ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ…

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.