ಮಡಿಕೇರಿ ಡಿ.20 : ಭಾಗಮಂಡಲ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ರೀತಿಯ ವೈದ್ಯಕೀಯ ಸೇವೆ ಕಲ್ಪಿಸಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಅಯ್ಯಂಗೇರಿ ಘಟಕ ಒತ್ತಾಯಿಸಿದೆ.
ಅಯ್ಯಂಗೇರಿ ಗ್ರಾಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಆಗಮಿಸಿದ ಸಂದರ್ಭ ಮನವಿ ಪತ್ರ ಸಲ್ಲಿಸಿದ ಎಸ್‌ಡಿಪಿಐ ಪ್ರಮುಖರು ಭಾಗಮಂಡಲ ಆಸ್ಪತ್ರೆಯಲ್ಲಿರುವ ಕೊರತೆಗಳ ಬಗ್ಗೆ ವಿವರಿಸಿದರು.
ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ ಶಾಸಕರು ಆಸ್ಪತ್ರೆಯಲ್ಲಿ ಉತ್ತಮ ವೈದ್ಯಕೀಯ ಸೇವೆ ಲಭಿಸುವಂತೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಮನವಿ ಸಲ್ಲಿಸುವ ಸಂದರ್ಭ ಎಸ್‌ಡಿಪಿಐ ಅಯ್ಯಂಗೇರಿ ಘಟಕದ ಅಧ್ಯಕ್ಷ ಉಸ್ಮಾನ್, ಕೋಶಾಧಿಕಾರಿ ಸಲಾಂ, ಸದಸ್ಯರಾದ ಮುನೀರ್ ಹಾಗೂ ಸಲಾಂ ಉಪಸ್ಥಿತರಿದ್ದರು.










