ಸುಂಟಿಕೊಪ್ಪ,ಡಿ.20: ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ ಮತ್ತು ವಾರ್ಷಿಕೋತ್ಸವವು ಡಿ.22 ಮತ್ತು 23 ರಂದು ನಡೆಯಲಿದೆ.
ಡಿ.22 ರಂದು ಬೆಳಿಗ್ಗೆ 10 ಗಂಟೆಗೆ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಮಾಜಿ ಸೈನಿಕ ಸುಬ್ರಾಯ ಕಾಸ್ಪಾಡಿ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.
ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರಿಗೆ, ಮಾಧ್ಯಮಿಕ ಶಾಲಾ ಬಾಲಕ ಮತ್ತು ಬಾಲಕಿಯರಿಗೆ, ಸಾರ್ವಜನಿಕ ಪುರುಷ ಮತ್ತು ಮಹಿಳೆಯರಿಗೆ ಆಯೋಜಿಸಲಾಗಿದೆ. ಪುರುಷರ ಪ್ರದರ್ಶನ ಕಬಡ್ಡಿ ಪಂದ್ಯಾವಳಿಯಲ್ಲಿ ಸುಂಟಿಕೊಪ್ಪ, 7ನೇ ಹೊಸಕೋಟೆ, ಕಂಬಿಬಾಣೆ ಹಾಗೂ ಕೊಡಗರಹಳ್ಳಿ ತಂಡಗಳು ಪಾಲ್ಗೊಳ್ಳಲಿವೆ.
ಸಮಾರೋಪ ಸಮಾರಂಭ ಸೋಮವಾರಪೇಟೆ ಶಾಲಾ ಶಿಕ್ಷಣ ಇಲಾಖೆಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಕುಮಾರಿ, ಕೊಡಗರಹಳ್ಳಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಹೆಚ್.ಪಿ.ರವೀಶ್, ಸುಂಟಿಕೊಪ್ಪ ಪಿ.ಎ.ಸಿ.ಎಸ್. ಉಪಾಧ್ಯಕ್ಷೆ ರಮ್ಯ ಮೋಹನ್ ಆಗಮಿಸಲಿದ್ದಾರೆ.

ಡಿ.23 ರಂದು ಶಾಲಾ ವಾರ್ಷಿಕೋತ್ಸವ ಸಮಾರಂಭ ನಡೆಯಲಿದ್ದು, ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎ.ಲೋಕೇಶ್‍ಕುಮಾರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೆ.ಎಸ್.ಮಂಜುನಾಥ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಡಿಕೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಎಂ.ಚಂದ್ರಕಾಂತ್, ಬೆಂಗಳೂರು ಎಂಬೆಸ್ಸಿ ಗ್ರೂಪ್ ಸಹಉಪಾಧ್ಯಕ್ಷ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪ್ಪಳ್ಳಿ ರವೀಂದ್ರ, ಕೊಡರಹಳ್ಳಿ ಗ್ರಾ.ಪಂ. ನಾಗಚೆಟ್ಟೀರ ನಿರತ ಬೆಳ್ಳಿಯಪ್ಪ, ಕೊಡಗರಹಳ್ಳಿ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾದ್ಯಾಯನಿ ಮೇರಿ ಫಾತೀಮಾ, 7ನೇ ಹೊಸಕೋಟೆ ದೀಪ್ತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಸಿಸ್ಟರ್ ಎನ್.ಈ.ಜಿಜಿ, ಸುಂಟಿಕೊಪ್ಪದ ವರ್ತಕ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಪಿ.ಎಂ.ಭರತ್ ಆಗಮಿಸಲಿದ್ದಾರೆ ಎಂದು ಶಾಲೆಯ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











