ಮಡಿಕೇರಿ ಡಿ.22 : ಕೇಂದ್ರ ಬಿಜೆಪಿ ಸರಕಾರವು ಸಂಸತ್ತಿನ ಉಭಯ ಸದನಗಳ 142 ಸಂಸದರನ್ನು ಅಸಂವಿಧಾನಿಕ ರೀತಿಯಲ್ಲಿ ಅಮಾನತ್ತುಗೊಳಿಸಿ, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಆರೋಪಿಸಿ ಡಿ.22 ರಂದು ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ.
ಎಐಸಿಸಿ ಹಾಗೂ ಕೆಪಿಸಿಸಿ ರಾಷ್ಟ್ರವ್ಯಾಪ್ತಿ ಕರೆ ನೀಡಿರುವ ಹಿನ್ನೆಲೆ ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಇರುವ ಚೌಕಿ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದ್ದು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಮಾಜಿ ಸಚಿವರುಗಳು ಹಾಗೂ ಶಾಸಕರುಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ನಗರ ಸಭಾ ಮಾಜಿ ಸದಸ್ಯರು ,ಮಡಿಕೇರಿ ನಗರದ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, 29 ಬೂತ್ ಗಳ ಎಲ್ಲಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಸುವಂತೆ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವೈ.ರಾಜೇಶ್ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.








