ಮಡಿಕೇರಿ, ಡಿ.21 : ವಿಧ್ಯಾರ್ಥಿಗಳು ಸಾಹಿತ್ಯ ಅಧ್ಯಯನದ ಮುಖಾಂತರ ಸಾಹಿತ್ಯ ಕ್ಷೇತ್ರದಲ್ಲಿಯೂ ಸಾಧನೆ ಮಾಡಲಿ ಎಂಬ ಉದ್ದೇಶದಿಂದ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ರಾಷ್ಟ್ರಕವಿ, ವಿಶ್ವ ಮಾನವ ಕುವೆಂಪು ಅವರ ಜನ್ಮದಿನದ ಅಂಗವಾಗಿ, ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಹಕಾರದೊಂದಿಗೆ ಕುಶಾಲನಗರ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದೆ.
ತಾ. 30 ರಂದು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕುವೆಂಪು ಅವರ ಸಾಹಿತ್ಯ, ನಾಡು, ನುಡಿ, ಕಲೆ ವಿಷಯದ ಮೇಲೆ ರಸಪ್ರಶ್ನೆ ನಡೆಯಲಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರಶಂಸನ ಪತ್ರ, ಪ್ರಥಮ, ದ್ವಿತೀಯ ಹಾಗು ತೃತೀಯ ನಗದು ಬಹುಮಾನ ಮತ್ತು ಫಲಕ ನೀಡಲಾಗುವುದು.ಭಾಗಬಹಿಸುವ ವಿಧ್ಯಾರ್ಥಿ ಗಳು ತಮ್ಮ ಕಾಲೇಜಿನ ಪ್ರಾಂಶುಪಾಲರಿಂದ ಗುರುತಿನ ಪತ್ರ ತರಬೇಕು. ಒಂದು ಕಾಲೇಜಿನಿಂದ ತಲಾ ಮೂರು ವಿಧ್ಯಾರ್ಥಿಗಳಿಗೆ ಭಾಗವಹಿಸುವ ಅವಕಾಶ ವಿರುತ್ತದೆ. ಸ್ಪರ್ಧಿಗಳು ತಾ. 28 ರೊಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕಾಗಿದೆ. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಬಳಗದ ಅಧ್ಯಕ್ಷ -ಲೋಕೇಶ್ ಸಾಗರ್ (9980988123), ಸಂಚಾಲಕ-ನಾಗೇಗೌಡ (9448072619) ಅವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.











