ಬೆಂಗಳೂರು ಡಿ.21 : ಕೊಡಗಿನ ಪ್ರಖ್ಯಾತ ಕೊಡವ ಕುಟುಂಬಗಳ ನಡುವಿನ ಹಾಕಿ ಹಬ್ಬ ಕುಂಡ್ಯೊಳಂಡ ಕಪ್ ಹಾಕಿ-2024 ರ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತ ನಿವಾಸ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು.

ಮುಖ್ಯಮಂತ್ರಿಯವರ ಕಾನೂನು ಸಲಹೆಗಾರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಬೋಪಣ್ಣ ಮತ್ತು ಕುಂಡ್ಯೊಳಂಡ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.












