ಮಡಿಕೇರಿ ಡಿ.22 : ಕೇಂದ್ರ ಸರ್ಕಾರ ಸಂಸತ್ತಿನ 142 ಸಂಸದರನ್ನು ಅಮಾನತುಗೊಳಿಸಿದನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿದರು.
ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತಪ್ಪ ಮಾತನಾಡಿ, ಕೇಂದ್ರದ ಬಿಜೆಪಿ ಸರಕಾರ ಸಂಸತ್ತಿನ ಉಭಯ ಸದನದ 142 ಸಂಸದರನ್ನು ಅಸಾಂವಿಧಾನಿಕ ರೀತಿಯಲ್ಲಿ ಅಮಾನತು ಗೊಳಿಸಿ, ಪ್ರಜಾಪ್ರಭುತ್ವದ ಕಾಗೋಲೆ ಮಾಡುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.
ಕಾಂಗ್ರೆಸ್ ಹಿರಿಯ ಮುಖಂಡ ಟಿ.ಪಿ.ರಮೇಶ್, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ನಗರ ಕಾಂಗ್ರೆಸ್ ಆಧ್ಯಕ್ಷ ರಾಜೇಶ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಸಾಮಾಜಿಕ ಜಾಲತಾಣ ಅಧ್ಯಕ್ಷ ಸೂರಜ್ ಹೊಸೂರು, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಾಯ್ಯ ಅಬ್ರಾರ್, ಮುಖಂಡರಾದ ಕೊಲ್ಯದ ಗಿರೀಶ್, ಕಾನೆಹಿತ್ಲು ಮೊಣ್ಣಪ್ಪ, ಜುಲೇಕಾಬಿ , ಚುಮ್ಮಿ ದೇವಯ್ಯ ಸೇರಿದಂತೆ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದರು.







