ಮೈಸೂರು ಡಿ 22: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿದರು.
ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್ ವಹಿಸಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಜಿಲ್ಲೆಯ ಶಾಸಕರುಗಳಾದ ಜಿ.ಟಿ.ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡರು, ರವಿಶಂಕರ್, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡರು, ಎ.ಹೆಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಮದನ್ ಗೌಡ, ಪತ್ರಕರ್ತರ ಸಂಘಗಳ ಒಕ್ಕೂಟದ ಮುಖಂಡರಾದ ಮಲ್ಲಿಕಾರ್ಜುನಯ್ಯ ಸೇರಿ ಹಲವು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.















