Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ  : ವಿದ್ಯಾರ್ಥಿಗಳಲ್ಲಿ ಅನ್ವೇಷಣೆ ಬೆಳೆಸಲು ಬೇಬಿ ಮ್ಯಾಥ್ಯೂ ಕರೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ  : ವಿದ್ಯಾರ್ಥಿಗಳಲ್ಲಿ ಅನ್ವೇಷಣೆ ಬೆಳೆಸಲು ಬೇಬಿ ಮ್ಯಾಥ್ಯೂ ಕರೆ* 

ಡಿಸೆಂಬರ್ 22, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, ಡಿ.22: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕಾ ಆಸಕ್ತಿ ಬೆಳೆಸುವುದರೊಂದಿಗೆ
ಅವರಲ್ಲಿ ವೈಜ್ಞಾನಿಕ ಅನ್ವೇಷಣೆ ಬೆಳೆಸುವ ಮೂಲಕ ಅವರನ್ನು ಭವಿಷ್ಯದ ವಿಜ್ಞಾನಿಗಳಾಗಿ ರೂಪಿಸಲು ಪ್ರೇರೇಪಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ  ಕರೆ ನೀಡಿದರು.
ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ( ಎನ್.ಸಿ.ಎಸ್.ಟಿ.ಸಿ.), ಮಡಿಕೇರಿ ನಗರದ ಕೊಡಗು ವಿದ್ಯಾಲಯ, ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ- ಸ್ಟೆಪ್ಸ್ ), ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಮಡಿಕೇರಿ ನಗರದ ಕೊಡಗು ವಿದ್ಯಾಲಯ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಕೊಡಗು ವಿದ್ಯಾಲಯ ಶಿಕ್ಷಣ ಸಂಸ್ಥೆಯಲ್ಲಿ ನಡೆದ  ಕೊಡಗು ಜಿಲ್ಲಾಮಟ್ಟದ 31ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: 2023 ವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಅಧ್ಯಯನ ಮಾಡಬೇಕು. ಮಕ್ಕಳ ವಿಜ್ಞಾನ ಸಮಾವೇಶವು ಮಕ್ಕಳ ಬೌದ್ಧಿಕ ವಿಕಸನ ಹಾಗೂ ಅನ್ವೇಷಣೆ ನಡೆಸಲು ಸಹಕಾರಿಯಾಗಿದ್ದು, ಭವಿಷ್ಯದ ವಿಜ್ಞಾನಿಗಳಾಗಿ ರೂಪಿಸಲು ಸಹಕಾರಿಯಾಗಿದೆ ಎಂದರು.
ಕೊಡಗಿನಲ್ಲಿ ಜಿಲ್ಲಾ ವಿಜ್ಞಾನ ಪರಿಷತ್ತಿನ ವತಿಯಿಂದ ವಿಜ್ಞಾನ ಸಮಾವೇಶ ಸೇರಿದಂತೆ ಪರಿಸರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಹಾಗೂ ಪರಿಸರದ ಆಸಕ್ತಿ ಬೆಳೆಸುತ್ತಿರುವುದು ಶ್ಲಾಘನೀಯವಾದುದು ಎಂದು ಬೇಬಿ ಮ್ಯಾಥ್ಯೂ ಹೇಳಿದರು.
ಸಮಾವೇಶದ ತಾಂತ್ರಿಕ ಅಧಿವೇಶನಕ್ಕೆ ಚಾಲನೆ ನೀಡಿ ಮಕ್ಕಳೊಂದಿಗೆ ಅಭಿಪ್ರಾಯ ಹಂಚಿಕೊಂಡ ಕೊಡಗು ಜಿಲ್ಲಾ ಅಪರ ಜಿಲ್ಲಾಧಿಕಾರಿ ಬಿ.ಎನ್.ವೀಣಾ , ವಿದ್ಯಾರ್ಥಿಗಳು ವಿಜ್ಞಾನಿಗಳ ಸಾಧನೆಗಳ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿ ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಂಶೋಧನೆ ಕೈಗೊಂಡು ವಿಜ್ಞಾನದ ಸವಾಲುಗಳನ್ನು ಎದುರಿಸುವಲ್ಲಿ ಸನ್ನದ್ಧರಾಗಬೇಕು ಎಂದರು.
ಕಿರಿಯ ವಿಜ್ಞಾನಿಗಳು ತಯಾರಿಸಿದ್ದ ವೈಜ್ಞಾನಿಕ ಯೋಜನೆ ಹಾಗೂ ಮಾದರಿಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದ ಅವರು, ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ವಿದ್ಯಾರ್ಥಿಗಳು ಇಂತಹ ಸೂಕ್ತ ಅವಕಾಶಗಳನ್ನು ಬಳಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ವೀಣಾ ಹೇಳಿದರು.
ಮಡಿಕೇರಿ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಭಾಸ್ಕರ್ ಮಾತನಾಡಿ, ಪ್ರಾಕೃತಿಕ ಸಂಪನ್ಮೂಲ ಹೊಂದಿರುವ ಕೊಡಗು ಜಿಲ್ಲೆಯಲ್ಲಿ ಪರಿಸರ ಮತ್ತು ವನ್ಯಜೀವಿಗಳ ಪಾತ್ರ ಪ್ರಮುಖವಾದುದು. ಜಿಲ್ಲೆಯಲ್ಲಿ ನಡೆಯುತ್ತಿರುವ ವನ್ಯಜೀವಿಗಳು ಮತ್ತು ಮಾನವ ಸಂಘರ್ಷದ ಬಗ್ಗೆ ವಿದ್ಯಾರ್ಥಿಗಳು ವೈಜ್ಞಾನಿಕ ಅಧ್ಯಯನ ಕೈಗೊಂಡು ಸೂಕ್ತ ಪರಿಹಾರ ಕಂಡುಕೊಳ್ಳುವ ಮೂಲಕ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಬೇಕು. ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರ ನೀಡಲು ಪ್ರತಿಯೊಬ್ಬರು ಪಣ ತೊಡಬೇಕಿದೆ ಎಂದರು.
ಕೊಡಗಿನ ಪ್ರಾಕೃತಿಕ ಪರಿಸರವು ಪ್ರಯೋಗಶಾಲೆಯಂತಿದ್ದು, ಇಲ್ಲಿನ ನೈಸರ್ಗಿಕ ಅರಣ್ಯ ಹಾಗೂ ಪರಿಸರ ಸಂರಕ್ಷಣೆಗೆ ಎಲ್ಲರೂ ಪಣ ತೊಡಬೇಕು ಎಂದರು.
ಇಂತಹ ವಿಜ್ಞಾನ ಸಮಾವೇಶಗಳು ವಿದ್ಯಾರ್ಥಿಗಳಿಗೆ ಪರಿಸರ ವ್ಯವಸ್ಥೆಯನ್ನು ಅರಿತು ಸ್ವತಃ ಪರಿಹಾರ ಕಂಡುಕೊಂಡು ಭವಿಷ್ಯದಲ್ಲಿ ಉತ್ತಮ ವಿಜ್ಞಾನಿಗಳಾಗಿ ರೂಪುಗೊಳ್ಳಲು ಉತ್ತಮ ವೇದಿಕೆ ಒದಗಿಸುತ್ತವೆ ಎಂದರು.

ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಪರಿಕಲ್ಪನೆ ಹಾಗೂ ಉದ್ದೇಶದ ಕುರಿತು ಮಾಹಿತಿ ನೀಡಿದ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ  ಹಾಗೂ  ಸಮಾವೇಶದ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಮಕ್ಕಳ ವಿಜ್ಞಾನ ಸಮಾವೇಶವು ಮಕ್ಕಳಲ್ಲಿ ಮೂಲ ವಿಜ್ಞಾನ ಕಲಿಕೆಯೊಂದಿಗೆ ಸಮಾವೇಶದ ಕೇಂದ್ರ ವಿಷಯದಡಿ ತಮ್ಮ ಸುತ್ತಲಿನ ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಸ್ವತಃ ತಾವೇ ಪರಿಹಾರ ಕಂಡುಕೊಳ್ಳುವ ಮೂಲಕ ವೈಜ್ಞಾನಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಹಾಗೂ ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ರೂಪುಗೊಳ್ಳಲು ಉತ್ತಮ ವೇದಿಕೆ ಕಲ್ಪಿಸುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರ ಮಾತನಾಡಿ, ಇಂತಹ ವಿಜ್ಞಾನ ಸಮಾವೇಶಗಳು ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಬೆಳೆಸುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಭವಿಷ್ಯದಲ್ಲಿ ವಿಜ್ಞಾನ ಕಲಿಕೆಗೆ ಹೆಚ್ಚಿನ ಪ್ರೇರೇಪಣೆ ನೀಡಲು ಸಹಕಾರಿಯಾಗಿವೆ ಎಂದರು.
ಸಂಸ್ಥೆಯ ಆಡಳಿತಾಧಿಕಾರಿ ಪಿ.ರವಿ, ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ, ವಿಜ್ಞಾನ ಪರಿಷತ್ತಿನ ಪದಾಧಿಕಾರಿಗಳಾದ ಎಂ.ಎನ್.ವೆಂಕಟನಾಯಕ್, ಜಿ.ಶ್ರೀನಾಥ್, ಎಸ್.ಎಚ್.ಈಶ, ಟಿ.ವಿ.ಶೈಲಾ, ಸಿ ಆರ್ ಪಿ ಪಿ.ಆರ್.ಕಲ್ಪನ, ಬಿ ಆರ್ ಪಿ ಮಂಜುಳಾ ಚಿತ್ರಾಪುರ, ಗೈಡ್ಸ್ ಸಂಸ್ಥೆಯ ಕ್ಯಾಪ್ಟನ್ ಸಿ.ಎಂ.ಸುಲೋಚನ
ಇತರರು ಇದ್ದರು.
ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ ಸ್ವಾಗತಿಸಿದರು. ಶಿಕ್ಷಕಿ  ಪಿ.ಎಸ್.ಕವಿತ ಕಾರ್ಯಕ್ರಮ ನಿರ್ವಹಿಸಿದರು.  ಶಿಕ್ಷಕಿ ಲಾವಣ್ಯ ವಂದಿಸಿದರು. ಸಂಸ್ಥೆಯ ವಿದ್ಯಾರ್ಥಿಗಳಾದ ಮನಸ್ವಿ ಮತ್ತು ತಂಡದ ವತಿಯಿಂದ
ಪರಿಸರ ಗೀತೆ ಹಾಡಿದರು.
ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ್ದ 24 ಮಂದಿ ವಿದ್ಯಾರ್ಥಿಗಳು ಸಮಾವೇಶದ ಕೇಂದ್ರ ವಿಷಯದಡಿ ವಿವಿಧ ಉಪ ವಿಷಯಗಳ ಕುರಿತು ಸ್ವತಃ ತಯಾರಿಸಿದ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ಮಂಡಿಸಿ ಗಮನ ಸೆಳೆದರು. 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.