ಮಡಿಕೇರಿ ಡಿ.22 : ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳು ಪ್ರವಾಸಿಗರ ಸಂದಶ೯ನಕ್ಕೆ ಮುಕ್ತವಾಗಿದ್ದು, ಸುರಕ್ಷಿತವಾಗಿದೆ. ಕೋವಿಡ್ ಕುರಿತು ಯಾವುದೇ ಆತಂಕ ಬೇಡ ಎಂದು ಕೊಡಗು ಜಿಲ್ಲಾ ಹೊಟೇಲ್, ರೆಸಾಟ್೯, ರೆಸ್ಟೋರೆಂಟ್ ಅಸೋಸಿಯೇಷನ್ ಹೇಳಿಕೆ ನೀಡಿದೆ.
ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗಿಲ್ಲ. ಜಿಲ್ಲಾಡಳಿತ, ಆರೋಗ್ಯ ಇಲಾಖೆಯ ಮಾಗ೯ಸೂಚಿಯನ್ವಯ ಎಲ್ಲಾ ಹೋಟೇಲ್, ರೆಸಾಟ್೯, ರೆಸ್ಟೋರೆಂಟ್ ಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೊಡಗು ಜಿಲ್ಲೆಗೆ ಪ್ರವಾಸಿಗರು ಭೇಟಿ ನೀಡಲು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಕೊಡಗಿನ ಎಲ್ಲಾ ಪ್ರವಾಸಿತಾಣಗಳು ಪ್ರವಾಸಿಗರ ಭೇಟಿಗೆ ಮುಕ್ತವಾಗಿದ್ದು ಸುರಕ್ಷಿತವಾಗಿದೆ. ಕ್ರಿಸ್ ಮಸ್ ಮತ್ತು ಹೊಸ ವಷಾ೯ಚರಣೆಗೆ ಕೊಡಗು ಸಿದ್ದವಾಗಿದೆ ಎಂದು ಕೊಡಗು ಜಿಲ್ಲಾ ಹೋಟೇಲ್, ರೆಸಾಟ್೯, ರೆಸ್ಟೋರೆಂಟ್ ಅಸೋಸಿಯೇಷನ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.







