ಮಡಿಕೇರಿ ಡಿ.23 : ಪ್ರಸಕ್ತ(2023-24) ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‍ಡಿ ಅಧ್ಯಯನದಲ್ಲಿ ತೊಡಗಿರುವ (ದಿನಾಂಕ 30-01-203 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್‍ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
2023-24ನೇ ಸಾಲಿನಲ್ಲಿ ಕರ್ನಾಟಕ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‍ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಪ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನವಾಗಿದೆ.
ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್‍ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ನಿಗಧಿಪಡಿಸಿರುವ ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ರೂ.4.50 ಲಕ್ಷ, ಪ್ರವರ್ಗ-2ಎ, 3ಎ, 3ಬಿ ರೂ.3.50 ಲಕ್ಷ, ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು. ಅಭ್ಯರ್ಥಿಗಳು ಪೂರ್ಣಾವಧಿ ಪಿಎಚ್‍ಡಿ ಅಧ್ಯಯನಕ್ಕಾಗಿ ಮಾಡಿರುವ ನೋಂದಣಿ ದಿನಾಂಕವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ವ್ಯಾಸಂಗ ವೇತನ, ಫೆಲೋಶಿಪ್‍ಗೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕಕ್ಕೆ ಹಿಂದಿನ 2 ವರ್ಷದೊಳಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಾಲಿನಿಂದ ಪ್ರಥಮ ವರ್ಷದ ಪಿಎಚ್‍ಡಿ ಅಧ್ಯಯನದಲ್ಲಿ ತೊಡಗಿರಬೇಕು.ಅಭ್ಯರ್ಥಿಗಳು ಅರ್ಜಿ ಪ್ರತಿ ಹಾಗೂ ಮೂಲ ದಾಖಲೆಗಳನ್ನು ಜನವರಿ, 10 ರೊಳಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಮ್ಯಾನ್ಸ್ ಕಾಂಪೌಂಡ್ ಹತ್ತಿರ ದೇವರಾಜ ಅರಸು ಭವನ, ಮಡಿಕೇರಿ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳು ಇಲಾಖಾ ವೆಬ್‍ಸೈಟ್ https://www.bcwd.karnataka.gov.in ನಲ್ಲಿ ಲಭ್ಯ ಇರುತ್ತದೆ. ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.









