ಮಡಿಕೇರಿ ಡಿ.23 : ನಗರಸಭೆಯ ಸರ್ವ ಪಕ್ಷಗಳ ನಿಯೋಗ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರನ್ನು ಭೇಟಿ ಮಾಡಿ 4ನೇ ಹಂತದ ನಗರೋತ್ಥಾನ ಕಾಮಗಾರಿಯಲ್ಲಿ ಆಗುತ್ತಿರುವ ವಿಳಂಬ, ನಗರಸಭೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಗಮನ ಸೆಳೆಯುವಂತೆ ಮನವಿ ಸಲ್ಲಿಸಿದರು.
ಈ ಸಂದರ್ಭ ನಗರಸಭೆ ಉಪಾಧ್ಯಕ್ಷೆ ಸವಿತಾ ರಾಕೇಶ್ ಸೇರಿದಂತೆ ನಗರಸಭಾ ಸದಸ್ಯರು ಹಾಜರಿದ್ದರು.










