Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ : ಕೊಡಗರಹಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಜಾ ಳಿಗೆ ಬಾಲ ವಿಜ್ಞಾನಿ ಪ್ರಶಸ್ತಿ : ಕೊಡಗಿನಿಂದ‌ 8 ಕಿರಿಯ ವಿಜ್ಞಾನಿಗಳು ರಾಜ್ಯಮಟ್ಟಕ್ಕೆ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ : ಕೊಡಗರಹಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಜಾ ಳಿಗೆ ಬಾಲ ವಿಜ್ಞಾನಿ ಪ್ರಶಸ್ತಿ : ಕೊಡಗಿನಿಂದ‌ 8 ಕಿರಿಯ ವಿಜ್ಞಾನಿಗಳು ರಾಜ್ಯಮಟ್ಟಕ್ಕೆ ಆಯ್ಕೆ*

ಡಿಸೆಂಬರ್ 23, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಡಿ.24: ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ (ಎನ್.ಸಿ.ಎಸ್.ಟಿ.ಸಿ.), ಮಡಿಕೇರಿ ನಗರದ ಕೊಡಗು ವಿದ್ಯಾಲಯದಲ್ಲಿ ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ
“ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಕೊಡಗು ವಿದ್ಯಾಲಯ ಶಿಕ್ಷಣ ಸಂಸ್ಥೆಯಲ್ಲಿ  ನಡೆದ  ಕೊಡಗು ಜಿಲ್ಲಾ ಮಟ್ಟದ 31ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: 2023 ದಲ್ಲಿ  ‘ಕಲುಷಿತಗೊಳ್ಳುತ್ತಿರುವ ನದಿಯ ತೀರಗಳು” ಎಂಬ ವಿಷಯದ
ಕುರಿತು ಉತ್ತಮವಾಗಿ ವೈಜ್ಞಾನಿಕ ಯನ್ನು ಯೋಜನಾ ಪ್ರಬಂಧ ಮಂಡಿಸಿದ ಸುಂಟಿಕೊಪ್ಪ ಬಳಿಯ
ಕೊಡಗರಹಳ್ಳಿ ಸುಂಟಿಕೊಪ್ಪನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್.ಶ್ರೀಜಾ ಳಿಗೆ ಬಾಲ ವಿಜ್ಞಾನಿ ಪ್ರಶಸ್ತಿ ಲಭಿಸಿದೆ.
ಜನವರಿ ಮೊದಲ ವಾರ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ವಿಜ್ಞಾನ ಸಮಾವೇಶಕ್ಕೆ ಕೊಡಗು ಜಿಲ್ಲಾಮಟ್ಟದಿಂದ ಆಯ್ಕೆಗೊಂಡ ಎಂಟು ಮಂದಿ ಕಿರಿಯ ವಿಜ್ಞಾನಿಗಳ ವಿವರ ಈ ಕೆಳಗಿನಂತಿದೆ.

ಯೋಜನೆ ಮಂಡಿಸಿದ ತಂಡದ ನಾಯಕರು ರಾಜ್ಯಮಟ್ಟದ ವಿಜ್ಞಾನ ಸಮಾವೇಶದಲ್ಲಿ ವೈಜ್ಞಾನಿಕ ಪ್ರಬಂಧ ಮಂಡಿಸಲು ಅರ್ಹತೆ ಪಡೆದಿದ್ದಾರೆ.

ನಗರ ಕಿರಿಯ ವಿಭಾಗ:: ಮಡಿಕೇರಿ ನಗರದ ಕೊಡಗು ವಿದ್ಯಾಲಯದ ಶ್ರೀಯ ಕಿರಣ್ ಮತ್ತು ಶ್ಲೋಕ್ ಅಯ್ಯಪ್ಪ (ಜೇನು ಕೃಷಿಯ ಮಹತ್ವ : ಮಾರ್ಗದರ್ಶಿ ಶಿಕ್ಷಕಿ ಎಂ.ಎಸ್.ಶೃತಿ ), ಇದೇ ಶಾಲೆಯ ಎಂ.ಪಿ.ಯಾಶಿಕ ಶೆಟ್ಟಿ ಮತ್ತು ಯಶ್ ಕಾರಿಯಪ್ಪ ( ಪರಿಸರ ವ್ಯವಸ್ಥೆಯಲ್ಲಿ ಏಡಿಗಳ ಕ್ಷೀಣಿಸುವಿಕೆ : ಮಾರ್ಗದರ್ಶಿ ಶಿಕ್ಷಕಿ : ಟಿ.ಜಯಶ್ರೀ)
ಗ್ರಾಮಾಂತರ ಕಿರಿಯ ವಿಭಾಗ::  ಕೊಡಗರಹಳ್ಳಿ ಸುಂಟಿಕೊಪ್ಪನಾಡು ಪ್ರೌಢಶಾಲೆಯ ಎ.ಎಸ್.ಶ್ರೀಶ ಮತ್ತು ಟಿ.ಎಸ್.ಶೃಜನ್ಯ ( ಕಲುಷಿತಗೊಳ್ಳುತ್ತಿರುವ ನದಿ ತೀರಗಳು : ಮಾರ್ಗದರ್ಶಿ ಶಿಕ್ಷಕಿ : ಎಂ.ಟಿ.ಶೋಭಾದಾಸ್)
ಪೊನ್ನಂಪೇಟೆ ಬಳಿಯ ಕಿರಗೂರು ಸರ್ಕಾರಿ ಪ್ರೌಢಶಾಲೆಯ ಎಚ್.ಬಿ.ಶ್ರೇಯಸ್ ಮತ್ತು ವೈ.ಆರ್.ಕೃತಿಕ್ ( ಮಾರಕವಾದ ಪ್ಲಾಸ್ಟಿಕ್ – ಪುನರ್ ಬಳಕೆ ಹಾದಿಯಲ್ಲಿ , ಮಾರ್ಗದರ್ಶಿ ಶಿಕ್ಷಕಿ : ಎಂ.ಎ.ಶ್ರೀಜ)
ಗ್ರಾಮಾಂತರ ಹಿರಿಯ ವಿಭಾಗ:: ಸುಂಟಿಕೊಪ್ಪ ಬಳಿಯ ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯ ಬಿ.ಆರ್.ಚೇತನ್ ಮತ್ತು ಎ.ಅಫ್ರಿನಾ ( ವನ್ಯಜೀವಿಗಳು ಮತ್ತು ಮಾನವ ಸಂಘರ್ಷ : ಕಾಡಾನೆಗಳ ಸುಳಿಯಲ್ಲಿ ರೈತಾಪಿ ಜನ: ಮಾರ್ಗದರ್ಶಿ ಶಿಕ್ಷಕಿ : ಟಿ.ವಿ.ಶೈಲಾ)
ತೊರೆನೂರು ಸರ್ಕಾರಿ ಪ್ರೌಢಶಾಲೆಯ ಟಿ.ಎ.ಪುಷ್ಪ ಮತ್ತು ಎ.ಆರ್.ಪೂರ್ವಿಕ ( ಸೊಳ್ಳೆಗಳ ಚೆಲ್ಲಾಟ – ಜನರಿಗೆ ಪ್ರಾಣ ಸಂಕಟ , ಮಾರ್ಗದರ್ಶಿ ಶಿಕ್ಷಕಿ : ಬಿ.ಪಿ.ಸವಿತ)
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಬೋರಮ್ಮ ಮತ್ತು ಕೆ.ವಿ.ಇಶ್ರತ್ ( ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಿ ಆರೋಗ್ಯ ಕಾಪಾಡಿ :ಮಾರ್ಗದರ್ಶಿ ಶಿಕ್ಷಕಿ : ಬಿ.ಡಿ.ರಮ್ಯ)
ನಗರ ಹಿರಿಯ ವಿಭಾಗ:: ಮಡಿಕೇರಿ ನಗರದ ಕೊಡಗು ವಿದ್ಯಾಲಯದ ಪಿ.ವಿ.ಲಕ್ಷ್ಯ ಮತ್ತು ಎಂ.ಭವಿಷ್ಯ ( ವನ್ಯಜೀವಿಗಳು ಮತ್ತು ಮಾನವನ ನಡುವಿನ ಸಂಘರ್ಷ – ಬದುಕಿ ಮತ್ತು ನಮ್ಮನ್ನು ಬದುಕಲು ಬಿಡಿ – ಆನೆಗಳ ಜತೆ ಸಹಬಾಳ್ವೆ ಜೀವನಕ್ಕೆ ಕರೆ : ,ಮಾರ್ಗದರ್ಶಿ ಶಿಕ್ಷಕಿ : ಪಿ.ಎಸ್.ಪೊನ್ನಮ್ಮ)

ಪ್ರಶಸ್ತಿ ಪ್ರದಾನ:
ಜಿಲ್ಲಾಮಟ್ಡದ ಬಾಲ ವಿಜ್ಞಾನಿ ಪ್ರಶಸ್ತಿ ಪುರಸ್ಕೃತ ಕೊಡಗರಹಳ್ಳಿ ಸುಂಟಿಕೊಪ್ಪನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಜ ಳಿಗೆ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ‌ ಪ್ರಾಂಶುಪಾಲ ಡಾ ಎನ್.ಎಸ್.ಸತೀಶ್ ,
ಬಾಲ ವಿಜ್ಞಾನಿ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿ ಪತ್ರ ವಿತರಿಸಿದ ಪ್ರಾಂಶುಪಾಲ ಡಾ ಎನ್.ಎಸ್.ಸತೀಶ್ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಕುತೂಹಲ ಬೆಳೆಸಿಕೊಂಡು ಪ್ರಶ್ನಿಸುವ ಮನೋಭಾವದೊಂದಿಗೆ ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಮಕ್ಕಳ ವಿಜ್ಞಾನ ಸಮಾವೇಶವು ಉತ್ತಮವಾಗಿ ಸಂಘಟನೆಗೊಂಡು , ಈ ಸಮಾವೇಶದಲ್ಲಿ
ಕೊಡಗು ಜಿಲ್ಲೆಯ ಮಕ್ಕಳ ಉತ್ತಮ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವಿಜ್ಞಾನ ಸಮಾವೇಶದ ಸಂಘಟಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಮಕ್ಕಳಿಗೆ ಈ ವಿಜ್ಞಾನ ಸಮಾವೇಶವು ಭವಿಷ್ಯದ ಬಾಲ ವಿಜ್ಞಾನಿಗಳಾಗಿ ರೂಪುಗೊಳ್ಳಲು ಉತ್ತಮ ವೇದಿಕೆ ಒದಗಿಸುತ್ತದೆ ಎಂದರು.
ಸಂಸ್ಥೆಯ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರ, ಬಾಲ ವಿಜ್ಞಾನಿಗಳು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ಜಿ.ಶ್ರೀನಾಥ್ , ವಿದ್ಯಾರ್ಥಿಗಳು ವಿಜ್ಞಾನ ಸಮಾವೇಶಕ್ಕೆ ಹೇಗೆ ಉತ್ತಮ ಯೋಜನೆಗಳನ್ನು ತಯಾರಿಸಬೇಕು ಎಂಬ ಬಗ್ಗೆ ಮಾಹಿತಿ ನೀಡಿದರು.
ಭಾರತ್ ಸ್ಕೌಟ್ಸ್ , ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮತ್ತು ನಗರದ
ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಕರೆಸ್ಪಾಂಡೆಂಟ್ ಮುನಿರ್ ಅಹ್ಮದ್  ವಿಜೇತ ತಂಡಗಳಿಗೆ ಪ್ರಶಸ್ತಿ ಪತ್ರ ವಿತರಿಸಿದರು.

ಸಂಸ್ಥೆಯ ಆಡಳಿತಾಧಿಕಾರಿ ಪಿ.ರವಿ ಮತ್ತು ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ‌ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ ನವೀನ್ ಗೌಡ, ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.
ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ, ರೋಟರಿ ವುಡ್ಸ್ ನ ಮಾಜಿ ಅಧ್ಯಕ್ಷ ಸಂಪತ್ ಕುಮಾರ್,
ವಿಜ್ಞಾನ ಪರಿಷತ್ತಿನ ಪದಾಧಿಕಾರಿ ಎಂ.ಎನ್.ವೆಂಕಟನಾಯಕ್, ಸದಸ್ಯರಾದ ಜಿ.ಶ್ರೀನಾಥ್, ಎಸ್.ಎಚ್.ಈಶ, ಟಿ.ವಿ.ಶೈಲಾ , ಗೈಡ್ಸ್ ಕ್ಯಾಪ್ಟನ್ ಸಿ.ಎಂ.ಸುಲೋಚನ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.