ಮೈಸೂರು ಡಿ.23 : ವಿಜಯನಗರ 2ನೇ ಹಂತದಲ್ಲಿರುವ ಕೊಡಗು ಗೌಡ ಸಮಾಜದ ಕಟ್ಟಡದ ನೂತನ ಸಭಾಂಗಣ ಇಂದು ಉದ್ಘಾಟನೆಗೊಂಡಿತು.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯವನ್ನು ವಹಿಸಿದ್ದರು.

ಆದಿಚುಂಚನಗಿರಿ ಮಠದ ಮೈಸೂರು ಶಾಖೆಯ ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಶಾಸಕ ಕೆ.ಹರೀಶ್‌ಗೌಡ, ಮಾಜಿ ಶಾಸಕರಾದ ಎಲ್.ನಾಗೇಂದ್ರ, ವಾಸು, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಕೆ.ವಿ.ಶ್ರೀಧರ್ , ಕೊಡಗು ಗೌಡ ಸಮಾಜದ ಅಧ್ಯಕ್ಷ ತೋಂಟಬೈಲು ಈ.ಮನೋಹರ್, ಪದಾಧಿಕಾರಿಗಳಾದ ಕುಂಟಿಕಾನ ಎಸ್.ಗಣಪತಿ, ಕಾಳೇರಮ್ಮನ ಎಂ.ನಾಣಯ್ಯ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.











