ಮೈಸೂರು ಡಿ.24 : ನಾನು ದೇಶದ್ರೋಹಿನಾ ಅಥವಾ ದೇಶಪ್ರೇಮಿನಾ ಎಂಬುವುದು ಬೆಟ್ಟದ ಚಾಮುಂಡಿ ತಾಯಿ, ಕೊಡಗಿನ ಕಾವೇರಿ ತಾಯಿಗೆ ತಿಳಿದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಮತ್ತು ಕೊಡಗಿನ ಜನ ನಾನು ಯಾರು ಎಂಬುವುದನ್ನು ತೀರ್ಮಾನ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಸಂಸತ್ ನಲ್ಲಿ ನಡೆದ ಘಟನೆ ಕುರಿತು ಮೈಸೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ದೇಶಪ್ರೇಮಿನಾ, ದೇಶದ್ರೋಹಿನಾ ಎಂಬುವುದನ್ನು ಜನ ತೀರ್ಮಾನ ಮಾಡುತ್ತಾರೆ ಎಂದರು.
2024 ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಹಾಗೂ ಕೊಡಗಿನ ಜನ ನನ್ನ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾನು ಏನು ಎಂಬುವುದನ್ನು ಅಂತಿಮವಾಗಿ ತೀರ್ಮಾನ ಕೊಡಬೇಕಾದವರು ನನ್ನ ಕ್ಷೇತ್ರದ ಜನ. ಅದರಾಚೆಗೆ ನಾನು ಏನೂ ಹೇಳುವುದಿಲ್ಲ ಎಂದು ಪ್ರತಾಪ್ ಸಿಂಹ ಸ್ಪಷ್ಟಪಡಿಸಿದರು.











