ಮರಗೋಡು ಡಿ.24: ಮಕ್ಕಳಲ್ಲಿ ವ್ಯಾವಹಾರಿಕ ಜ್ಞಾನ ಉತ್ತೇಜಿಸಲು ಮರಗೋಡಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮಕ್ಕಳಸಂತೆಯ£.
ತಮ್ಮ ಮನೆ, ತೋಟ ಮತ್ತು ಗದ್ದೆಯಲ್ಲಿ ಸಾವಯವ ಗೊಬ್ಬರ ಬಳಸಿ ಬೆಳೆಸಿದ ವಿವಿಧ ಬಗೆಯ ಹಣ್ಣು ತರಕಾರಿಗಳನ್ನು ಮಕ್ಕಳು ಮಾರಾಟ ಮಾಡಿ ಸಂಭ್ರಮಿಸಿದರು. ಮರಗೋಡು ಗ್ರಾಮಸ್ಥರು ಸಂತೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮೂರಿನ ಮಕ್ಕಳು ಬೆಳೆದ ತರಕಾರಿ, ಹಣ್ಣು ಹಂಪಲುಗಳನ್ನು ಖರೀದಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.

ವಿಶೇಷವಾಗಿ ಔಷಧೀಯ ಗುಣಗಳಿರುವ ಗಣಿಕೆ ಸೊಪ್ಪು, ನುಗ್ಗೆ ಸೊಪ್ಪು, ಕೆಸ, ಬಸಳೆ, ಕಹಿಹುಳಿ, ವಿಶಿಷ್ಟ ಸ್ವಾದದ ಫ್ಯಾಶನ್ ಫ್ರೂಟ್ ನಂತಹ ಹಣ್ಣು, ತರಕಾರಿಗಳನ್ನು ಭರ್ಜರಿಯಾಗಿ ಮಾರಾಟ ಮಾಡಿದ ಮಕ್ಕಳು ಸಾಕಷ್ಟು ಹಣ ಸಂಪಾದಿಸಿದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಕೆದಂಬಾಡಿ ಚಂದ್ರಕಲಾ, ಮರಗೋಡು ಗ್ರಾಮ ಪಂಚಾಯಿತಿ ಪಿಡಿಒ ಚಂದ್ರಮೌಳಿ, ಮರಗೋಡು ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕ ಉಮೇಶ್ ಹಾಗೂ ಶಾಲಾ ಸಿಬ್ಬಂದಿಗಳು ಮಕ್ಕಳ ಸಂತೆಯಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳ ವ್ಯಾವಹಾರಿಕ ಜ್ಞಾನದ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.












