ಮಡಿಕೇರಿ ಡಿ.24 : ಕುಶಾಲನಗರ ಪಟ್ಟಣದಲ್ಲಿರುವ ಶ್ರೀ ಆಂಜನೇಯ ದೇವಾಲಯದಲ್ಲಿ ರಾಮಾಂಜನೇಯ ಉತ್ಸವ ಸಮಿತಿ ವತಿಯಿಂದ ಹನುಮ ಜಯಂತಿ ಪೂಜಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ವಿವಿಧ ಧಾರ್ಮಿಕ ಕೈಂಕರ್ಯಗಳು, ಅಭಿಷೇಕ, ಅರ್ಚನೆ, ಭಜನೆ ಮತ್ತು ಮಹಾಮಂಗಳಾರತಿಗೆ ನೂರಾರು ಭಕ್ತರು ಸಾಕ್ಷಿಯಾದರು. ಪೂಜೆಯಲ್ಲಿ ಪಾಲ್ಗೊಂಡ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ದೇವಾಲಯಕ್ಕೆ ಆಗಮಿಸಿ ಭಕ್ತಾದಿಗಳಿಗೆ ಶಾಸಕರು ಸಿಹಿ ಹಂಚಿದರು.










