ಮಡಿಕೇರಿ ಡಿ.24 : ಸೋಮವಾರಪೇಟೆಯ ಬಾಸ್ಕೆಟ್ ಬಾಲ್ ಮೈದಾನದ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ದೂರುಗಳು ಕೇಳಿ ಬಂದ ಹಿನ್ನೆಲೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಟರ್ಫ್ ಮೈದಾನದ ಸ್ಟೇಡಿಯಮ್ ದುರಸ್ತಿ ಕಾಮಗಾರಿ ಭರದಿಂದ ಸಾಗಿದೆ. ಮೂಲಭೂತ ಸೌಲಭ್ಯಗಳಾದ ಶೌಚಾಲಯ ವ್ಯವಸ್ಥೆ, ತಡೆಗೋಡೆ, ಚರಂಡಿ, ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ಬಾಸ್ಕೆಟ್ ಬಾಲ್ ಮೈದಾನದ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕರು, ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದರು. ಈ ಸಂದರ್ಭ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಚಂಗಪ್ಪ, ಸೋಮವಾರಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಡಿ.ಯು, ಪ್ರಮುಖರಾದ ಚೇತನ್, ವಿನಿ, ಸೋಮೇಶ್ ಮತ್ತಿತರರು ಹಾಜರಿದ್ದರು.








