ಸುಂಟಿಕೊಪ್ಪ ಡಿ.25 : ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಶಾ ಜಿಲ್ಲಾ ಬಾಲ ವಿಜ್ಞಾನಿ ಪ್ರಶಸ್ತಿಗೆ ಭಾಜನರಾಗಿದ್ದು, ಅವರನ್ನು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯಲ್ಲಿ 59ನೇ ವಾರ್ಷಿಕೋತ್ಸವದ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ವೈಜ್ಞಾನಿಕ ಯೋಜನಾ ಪ್ರಬಂಧ ಮಂಡನೆಯ ವಿಷಯ, ಕಲುಷಿತಗೊಳ್ಳುತ್ತಿರುವ ನದಿ ತೀರಗಳು ವಿಚಾರದ ಕುರಿತು ಪ್ರಬಂಧ ಪ್ರಕಟಿಸಿ ಜಿಲ್ಲಾ ಯುವ ವಿಜ್ಞಾನಿ ಪ್ರಶಸ್ತಿ ತನ್ನದಾಗಿಸಿಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡ ವಿದ್ಯಾರ್ಥಿನಿ ಶ್ರೀಶಾ ಅವರಿಗೆ ವೇದಿಕೆಯಲ್ಲಿದ್ದ ಜಿಲ್ಲಾ ಕಾನೂನು ಸಲಹೆಗಾರರಾದ ಎ.ಲೋಕೇಶ್‍ಕುಮಾರ್, ಬೆಂಗಳೂರು ಎಂಬೆಸ್ಸಿ ಗ್ರೂಪ್ ಸಹಉಪಾಧ್ಯಕ್ಷ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಹರಪ್ಪಳ್ಳಿ ರವೀಂದ್ರ, 7ನೇ ಹೊಸಕೋಟೆ ದೀಪ್ತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಸಿಸ್ಟರ್ ಜಿಜಿ ಎನ್.ಈ., ಕೊಡಗರಹಳ್ಳಿ ಗ್ರಾ.ಪಂ ಅಧ್ಯಕ್ಷೆ ನಾಗಚೆಟ್ಟೀರ ನಿರತ ಬೆಳ್ಳಿಯಪ್ಪ, ಸುಂಟಿಕೊಪ್ಪ ಗ್ರಾ.ಪಂ.ಉಪಾಧ್ಯಕ್ಷ ಪ್ರಸಾದ್‍ಕುಟ್ಟಪ್ಪ ಹಾಗೂ ನಿವೃತ್ತ ಮುಖ್ಯ ಶಿಕ್ಷಕಿ ಕೆ.ಎಸ್.ಸಾವಿತ್ರಿ ಹಾಗೂ ಶಾಲಾಮುಖ್ಯೋಪಾದ್ಯಾಯನಿ ಕೆ.ಎಸ್.ಇಂದಿರಾ ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ನೀಡಿ ಗೌರವಿಸಿದರು.











