ಸುಂಟಿಕೊಪ್ಪ ಡಿ.25 : ಶ್ರೀ ಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ 53ನೇ ವರ್ಷದ ವಾರ್ಷಿಕ ಮಂಡಲ ಪೂಜಾ ಮಹೋತ್ಸವವು ಡಿ.27 ರಂದು ವಿವಿಧ ಪೂಜಾ ಕೈಂಕರ್ಯದೊಂದಿಗೆ ನಡೆಯಲಿದೆ ಎಂದು ಶ್ರೀಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದ ಆಡಳಿತ ಮಂಡಳಿ ತಿಳಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಂ.ಸುರೇಶ್ ಪುಟ್ಟ 27 ರ ಪೂರ್ವಾಹ್ನ ಗಣಪತಿ ಹೋಮದೊಂದಿಗೆ ಕಾರ್ಯಕ್ರಮಗಳು ಆರಂಭಗೊಂಡು ಬಿಲ್ವಪಾತ್ರೆ ಅರ್ಚನೆ, ತುಳಸಿ ಆರ್ಚನೆ ಪಂಚಾಮೃತ ಅಭೀಷೇಕ ದುರ್ವಾಚನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.
ಅಂದು ಮಧ್ಯಾಹ್ನ 1 ರಿಂದ 4 ಗಂಟೆಯವರೆಗೆ ಅನ್ನ ಸಂತರ್ಪಣೆ ನಡೆಯಲಿದ್ದು, ಸಂಜೆ 6.30 ಕ್ಕೆ ದೀಪರಾಧನನೆ ಮತ್ತು ಮೆರವಣಿಗೆ ನಡೆಯಲಿದೆ.
ರಾತ್ರಿ 7.30 ಕ್ಕೆ ದುರ್ಗಾಪೂಜೆ ನಡೆಯಲಿದ್ದು, ಮಹಾಮಂಗಳಾರತಿ ನಡೆಯಲಿದ್ದು, ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಸುರೇಶ್ ತಿಳಿಸಿದರು.











