ಬೆಂಗಳೂರು ಡಿ.26 : ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ಶ್ರೀ ರಾಮ ಲಾಲ್ ಮತ್ತಿತರರು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಪರವಾಗಿ ಆಹ್ವಾನ ನೀಡಿದರು.










