ವಿರಾಜಪೇಟೆ ಡಿ.26 : ಚನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಶಾಲಾ ಪ್ರವಾಸದಲ್ಲಿ ಕೊಡಗಿನ ಪ್ರವಾಸಿ ತಾಣಗಳಗೆ ಭೇಟಿ ನೀಡಿ, ವೀಕ್ಷಿಸಿದರು.
ಪಾಲಿಬೆಟ್ಟದ ಕೂರ್ಗ್ ಕ್ಲಿಪ್ ರೆಸಾರ್ಟ್ ಅವರ ಸಹಯೋಗದೊಂದಿಗೆ ವಿದ್ಯಾರ್ಥಿಗಳನ್ನು ಕೊಡಗಿನ ಪ್ರವಾಸಿ ತಾಣಗಳಾದ ಕಾವೇರಿ ನಿಸರ್ಗಧಾಮ ಹಾರಂಗಿ ಅಣೆಕಟ್ಟು ಗೋಲ್ಡನ್ ಟೆಂಪಲ್ ದುಬಾರೆ ಹಾಗೂ ಚಕ್ಲಿಹೊಳೆಗೆ ಒಂದು ದಿನದ ಪ್ರವಾಸ ಕೈಗೊಂಡಿದ್ದರು.
ಸರಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಿ ತಾಣಗಳಿಗೆ ಭೇಟಿ ನೀಡಿ, ಸಂಭ್ರಮಿಸಿದರು.










