ಮಡಿಕೇರಿ ಡಿ.27 : ಹಿಂದೂ ಸಂಘಟನೆಯ ಪ್ರಮುಖ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಕೊಡಗು ಜಿಲ್ಲಾ ವುಮೆನ್ ಇಂಡಿಯಾ ಮೂವ್ ಮೆಂಟ್ ಸಂಘಟನೆಯ ಅಧ್ಯಕ್ಷೆ ಸಲಿಕತ್ ಎಂ.ಇ ದೂರು ನೀಡಿದ್ದಾರೆ.
ಮುಸ್ಲಿಂ ಮಹಿಳೆಯರು ಹಾಗೂ ಯುವತಿಯರನ್ನು ಅವಮಾನಿಸಿದ ಮತ್ತು ಅಶಾಂತಿಗೆ ಪ್ರಚೋದನೆ ನೀಡುತ್ತಿರುವ ಆರೋಪದಡಿ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಲವ್ ಜಿಹಾದ್ ಕುರಿತು ಉಲ್ಲೇಖಿಸಿ ಮುಸ್ಲಿಂ ಯುವತಿಯರನ್ನು ಅವಮಾನಿಸಿದ್ದಾರೆ. ತ್ರಿವಳಿ ತಲಾಕ್ ರದ್ದುಪಡಿಸಿರುವ ಕ್ರಮವನ್ನು ಪ್ರಸ್ತಾಪಿಸಿ ಮಹಿಳೆಯರ ವೈವಾಹಿಕ ಜೀವನದ ಕುರಿತು ಅತ್ಯಂತ ಕೀಳಾಗಿ ಮಾತನಾಡಿದ್ದಾರೆ. ದೇಶದ್ರೋಹದ ಆರೋಪ ಹೊರಿಸುವ ಮೂಲಕ ಮುಸ್ಲಿಂ ಸಮುದಾಯದ ಸಾಂವಿಧಾನಿಕವಾದ ಬದುಕುವ ಹಕ್ಕಿನ ಮೇಲೆ ದಾಳಿಗೆ ಪ್ರಚೋದಿಸುವ ಕೃತ್ಯ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10 ಸಾವಿರ ಕೋಟಿ ರೂ.ಗಳನ್ನು ಮುಸ್ಲಿಮರಿಗೆ ಮೀಸಲಿಟ್ಟಿದ್ದಾರೆ ಎಂದು ಅಪಪ್ರಚಾರ ಮಾಡುವ ಮೂಲಕ ಮುಸಲ್ಮಾನರ ಮೇಲೆ ಇತರ ಸಮುದಾಯಗಳನ್ನು ಪರಸ್ಪರ ಎತ್ತಿ ಕಟ್ಟುವ ಕೆಲಸವನ್ನು ಪ್ರಭಾಕರ್ ಭಟ್ ಮಾಡಿದ್ದಾರೆ ಎಂದು ಸಲಿಕತ್ ಎಂ.ಇ ದೂರಿನಲ್ಲಿ ಆರೋಪಿಸಿದ್ದಾರೆ.
ನಗರ ಠಾಣೆಯಲ್ಲಿ ದೂರು ಸಲ್ಲಿಸುವ ಸಂದರ್ಭ ಮಡಿಕೇರಿ ನಗರಸಭಾ ಸದಸ್ಯರಾದ ಮೇರಿ ವೇಗಸ್, ನೀಮಾ ಹರ್ಷದ್ ಹಾಗೂ ಜಿಲ್ಲಾ ಸಮಿತಿ ಸದಸ್ಯೆ ತಾಹಿರಾ ಇಬ್ರಾಹಿಂ ಹಾಜರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*