ವಿರಾಜಪೇಟೆ ಡಿ.27 : ವಿರಾಜಪೇಟೆಯ ಅರಮೇರಿಯಲ್ಲಿರುವ ಎಸ್.ಎಂ.ಎಸ್ ಅಕಾಡೆಮಿಯಲ್ಲಿ ಡಿ.30 ರಂದು ‘ಏಕ ಭಾರತ ಶ್ರೇಷ್ಠ ಭಾರತ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಸಮಾರಂಭದಲ್ಲಿ ತುಮಕೂರು ಶ್ರೀ ಸಿದ್ಧಗಂಗಾ ಮಠದ ಶ್ರೀಗಳಾದ ಶ್ರೀ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು, ಶ್ರೀ ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಬೆಂಗಳೂರು ಉತ್ತರ ಸಿಜಿಎಸ್ಟಿ ಆಯುಕ್ತರುಗಳಾದ ಡಾ. ಎಂ.ಕೊಟ್ರಸ್ವಾಮಿ, ನಿವೃತ್ತ ಆರ್.ಟಿ.ಐ ಆಯುಕ್ತ ಜಿ.ಎಸ್.ವಿರೂಪಾಕ್ಷಯ್ಯ ಭಾಗವಹಿಸಲಿದ್ದಾರೆ.
ಈ ಸಂದರ್ಭ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸಿ.ಬಿ.ಎಸ್.ಇ ಯ ವಿವಿಧ ವಲಯಗಳಿಗೆ ಒಳಪಟ್ಟ ಡೋಗ್ರಿ, ಭಾಂಗ್ಡ, ಹರಿಯಾಣ, ಲೆಪ್ಚ, ನಾಗ, ಚೆರಾವು, ಥೌಗೋಲ್ ಜಗೋಯಿ, ದುನೋಚಿ, ಉತ್ತರಖಂಡ್ ಪಹಾಡಿ, ಗರ್ಭಾ, ಕರ್ನಾಟಕ ತಮಿಳುನಾಡು ಕೇರಳ ಜನಪದ ನೃತ್ಯಗಳು ಒಳಗೊಂಡಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಶಾಲೆಯ ಪ್ರಾಂಶುಪಲರಾದ ಕುಸುಮ್ ಟಿಟೋ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.