ಮಡಿಕೇರಿ ಡಿ.27 : ಕೊಡಗು ಜಿಲ್ಲಾ ಉಪವಿಭಾಗಾಧಿಕಾರಿಯಾಗಿ ವಿನಾಯಕ್ ನರ್ವಾಡೆ ಅಧಿಕಾರ ಸ್ವೀಕರಿಸಿದ್ದಾರೆ. ಇವರು 2021ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ.
ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಯತೀಶ್ ಉಲ್ಲಾಳ್ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಸಚಿವರಾಗಿ (ಆಡಳಿತ) ವರ್ಗಾವಣೆಯಾಗಿದ್ದಾರೆ.








