ಮಡಿಕೇರಿ ಡಿ.27 : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಡಿ.29 ರವರೆಗೆ ಕೊಡಗು ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ/ ಶಿಬಿರಗಳನ್ನು ಆಯೋಜಿಸಲಾಗಿದೆ.
ಈ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಸ್ಥಿತಿ ಪರಿಶೀಲನೆ, ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆ ತೆರೆಯುವುದು, ಇಕೆವೈಸಿ ಅಪ್‍ಡೇಟ್ ಮಾಡುವುದು ಹಾಗೂ ಇತರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ತಿಳಿಸಿದ್ದಾರೆ.









