ಮಡಿಕೇರಿ ಡಿ.28 : ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ‘ಇ ಕಾಮರ್ಸ್ ಮತ್ತು ಡಿಜಿಟಲ್ ವ್ಯಾಪಾರದ ಯುಗದಲ್ಲಿ ಗ್ರಾಹಕರ ರಕ್ಷಣೆ’ ಎಂಬ ವಿಷಯದಡಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯು ಡಿ.30 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ತಾಲೂಕಿನ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ರೇಣುಕಾಂಭ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರಮ್ಮಣ್ಣಿ, ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕೆ.ಕೆ.ನಾಗರಾಜ ಶೆಟ್ಟಿ, ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಬಿ.ಬಸಪ್ಪ, ಮೈಸೂರು ಗ್ರಾಹಕರ ಪರಿಷತ್ ಕಾರ್ಯನಿರ್ವಾಹಕ ಸದಸ್ಯರಾದ ರವಿ ಬಳೆ ಇತರರು ಪಾಲ್ಗೊಳ್ಳಲಿದ್ದಾರೆ.