ಚೆನ್ನೈ ಡಿ.28 : ತಮಿಳು ಚಿತ್ರರಂಗದ ಖ್ಯಾತ ನಟ ಮತ್ತು ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (ಆಒಆಏ) ಸಂಸ್ಥಾಪಕ ವಿಜಯಕಾಂತ್ (71) ಗುರುವಾರ ಬೆಳಗಿನ ಜಾವ ಚೆನ್ನೈಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ನ್ಯೂಮೋನಿಯಾ ಜ್ವರ ಮತ್ತು ಕೊರೊನಾ ಸೋಂಕಿನಿಂದಾಗಿ ಚೆನ್ನೈನ ಎಂಐಒಟಿ ಇಂಟರ್ನ್ಯಾಷನಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ತೀವ್ರ ಕ್ಷೀಣಿಸಿದ್ದರಿಂದ ನಿನ್ನೆ ರಾತ್ರಿಯಿಂದ ಅವರು ವೆಂಟಿಲೇಟರ್ ಬೆಂಬಲದಲ್ಲಿದ್ದರು. ಕ್ಯಾಪ್ಟನ್ ವಿಜಯಕಾಂತ್ ಅವರು ನ್ಯುಮೋನಿಯಾಕ್ಕೆ ದಾಖಲಾದ ನಂತರ ವೆಂಟಿಲೇಟರಿ ಬೆಂಬಲದಲ್ಲಿದ್ದರು. ವೈದ್ಯಕೀಯ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಇಂದು ಬೆಳಗ್ಗೆ ನಿಧನರಾದರು ಎಂದು ಆಸ್ಪತ್ರೆಯ ಬುಲೆಟಿನ್ ದೃಢಪಡಿಸಿದೆ.
ವಿಜಯ್ ಕಾಂತ್ ಅವರು ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಮತ್ತು ಅವರ ಇಬ್ಬರು ಪುತ್ರರನ್ನು ಅಗಲಿದ್ದಾರೆ.ಕಳೆದ ಕೆಲ ವರ್ಷಗಳಿಂದ ಆಗಾಗ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ್ ಕಾಂತ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಬರುತ್ತಿದ್ದರು. ಅನಾರೋಗ್ಯದಿಂದ ರಾಜಕಾರಣದಲ್ಲಿ ಕೂಡ ಸಕ್ರಿಯರಾಗಿರಲು ಸಾಧ್ಯವಾಗುತ್ತಿರಲಿಲ್ಲ. ಮೂರು ವಾರಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು ಕೊನೆಯುಸಿರೆಳೆದಿದ್ದಾರೆ.