ನಾಪೋಕ್ಲು ಡಿ.28 : ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಸೌಲಭ್ಯದಲ್ಲಿ ಉಂಟಾಗಿರುವ ಸಮಸ್ಯೆಗಳ ನಿವಾರಣೆಗೆ ಗ್ರಾ.ಪಂ ಸಭಾಂಗಣದಲ್ಲಿ ಶಿಬಿರ ನಡೆಯಿತು.
ಕಾರ್ಯಕ್ರಮದಲ್ಲಿ ಫಲಾನುಭವಿಗಳ ಆಧಾರ್ ಕಾರ್ಡ್ ಅಪ್ ಡೇಟ್, ಬ್ಯಾಂಕ್ ಖಾತೆಗೆ ಲಿಂಕ್ ಹಾಗೂ ರೇಶನ್ ಕಾರ್ಡ್ ಡೇಟಾ ಎಂಟ್ರಿ ಮಾಡಿ ಗೃಹಲಕ್ಷ್ಮಿ ಯೋಜನೆಯ ಸಮಸ್ಯೆ ನಿವಾರಣೆ ಮಾಡಲಾಯಿತು.
ಸರ್ಕಾರದ ಆದೇಶದಂತೆ ಗೃಹ ಲಕ್ಷ್ಮಿ ಫಲಾನುಭವಿಗಳ ಖಾತೆಗೆ ರೂ. 2000 ಜಮಾ ಆಗದಿದ್ದಲ್ಲಿ ಸಮಸ್ಯೆ ನಿವಾರಣೆಗೆ ಮೂರು ದಿನಗಳ ಶಿಬಿರ ಆಯೋಜಿಸಲಾಗಿದ್ದು, ಫಲಾನುಭವಿಗಳು ಸಮಸ್ಯೆಗಳಿದ್ದಲ್ಲಿ ನಿವಾರಿಸಿಕೊಳ್ಳಬಹುದಾಗಿದೆ ಎಂದು ಗ್ರಾಮ ಅಭಿವೃದ್ಧಿ ಅಧಿಕಾರಿ (ಪಿಡಿಒ) ಚೋಂದಕ್ಕಿ ಮಾಹಿತಿ ನೀಡಿದರು.
ಈ ಸಂದರ್ಭ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಕುಲೇಟಿರ ಹೇಮಾವತಿ ಅರುಣ್, ಪಂಚಾಯಿತಿ ಸದಸ್ಯರು, ವಿವಿಧ ಬ್ಯಾಂಕ್ ಗಳ ಸಿಬ್ಬಂದಿ, ಅಂಚೆ ಕಚೇರಿಯ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ