ಕುಶಾಲನಗರ ಡಿ.28 : ಕಲ್ಲಡ್ಕ ಪ್ರಭಾಕರ್ ಅವರು ಮುಸ್ಲಿಂ ಮಹಿಳೆಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕುಶಾಲನಗರ ತಾಲ್ಲೂಕು ಮುಸ್ಲಿಂ ಒಕ್ಕೂಟ ಪ್ರತಿಭಟನೆ ನಡೆಸಿತು.
ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ಪ್ರಮುಖರು ಹಾಗೂ ಪದಾಧಿಕಾರಿಗಳು ಕಲ್ಲಡ್ಕ ಪ್ರಭಾಕರ್ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಕುಶಾಲನಗರ ತಾಲ್ಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಬ್ದುಲ್ ಕರೀಂ ಹಾಗೂ ಕುಶಾಲನಗರ ಎಸ್.ಡಿ.ಪಿ.ಐ ಅಧ್ಯಕ್ಷ ಜ಼ಕರಿಯಾ ಮಾತನಾಡಿ, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಮುಸ್ಲಿಂ ಒಕ್ಕೂಟದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಜಮೀರ್, ಉಪಾಧ್ಯಕ್ಷ ಪಾಷಾ, ಪ್ರಮುಖರಾದ ಅನ್ವರ್, ಅಕ್ಬರ್, ಖಲೀಲ್, ಶರೀಫ್, ಸಲೀಂ, ಮೊಯ್ದೀನ್, ಸಮಿ, ಅಶ್ರಫ್, ಜ಼ರೀನಾ, ಹಮೀದ್, ಸಾಹುಲ್ ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.