ಮಡಿಕೇರಿ ಡಿ.28 : ಶ್ರೀ ಅಯ್ಯಪ್ಪ ದೀಪಾರಾಧನಾ ಸಮಿತಿ ವತಿಯಿಂದ ಡಿ.30 ರಂದು ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಅಯ್ಯಪ್ಪ ದೀಪಾರಾಧನಾ ಉತ್ಸವ ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ ಎಂದು ಮಾಹಿತಿ ನೀಡಿದರು.
ಬೆಳಿಗ್ಗೆ 6 ಗಂಟೆಗೆ ನಡೆ ತೆಗೆಯುವುದು, 6.5ಕ್ಕೆ ನಿರ್ಮಲ್ಯ ಪೂಜೆ, 6.0ಕ್ಕೆ ಗಣಪತಿ ಹೋಮ, 8 ಗಂಟೆಗೆ ಅಷ್ಟಾಭಿಷೇಕ ಸೇವೆ, 10.30 ಗಂಟೆಗೆ ತುಳಸಿ ಸಹಸ್ರನಾಮಾರ್ಚನೆ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.
ಮಧ್ಯಾಹ್ನ 1 ಗಂಟೆಗೆ ಪಾಲಕೊಂಬು ಪ್ರತಿಷ್ಠಾಪನೆ, 1.30 ಗಂಟೆಗೆ ತಾಯಂಬಲಂ (ಚಂಡೆಸೇವೆ) ನಡೆಯಲಿದ್ದು, ಸಂಜೆ 4 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಯ ಉತ್ಸವ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ಚಂಡೆ, ಮೇಳದೊಂದಿಗೆ ನಗರದ ಅಶ್ವಿನಿ ಗಣಪತಿ ದೇವಾಯಲಯದಿಂದ ಮುಖ್ಯಬೀದಿಗಳಲ್ಲಿ ಪಾಲಕೊಂಬು ಮೆರವಣಿಗೆ ನಡೆಯಲಿದ್ದು, ಭಕ್ತಾಧಿಗಳು, ಮಹಿಳೆಯರು ಹಾಗೂ ಹೆಣ್ಣುಮಕ್ಕಳು ಕಳಸದೊಂದಿಗೆ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಚಂದ್ರಶೇಖರ್ ಮನವಿ ಮಾಡಿದರು.
ಸಂಜೆ 6.30 ಗಂಟೆಗೆ ದೀಪಾರಾಧನೆ, ಅಲಂಕಾರ ಪೂಜೆ, 7.30 ಗಂಟೆಗೆ ಪಡಿ ರಂಗಪೂಜೆ, ದುರ್ಗಾಪೂಜೆ ಹಾಗೂ ಸುಬ್ರಹ್ಮಣ್ಯ ಪೂಜೆ ಜರುಗಲಿದ್ದು, ರಾತ್ರಿ 8.30 ಗಂಟೆಗೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನದಾನ ನೆರವೇರಲಿದೆ ಎಂದರು.
ರಾತ್ರಿ 12 ಗಂಟೆಯಿಂದ 2 ಗಂಟೆಯವರೆಗೆ ಅಗ್ನಿಪೂಜೆ ನಡೆಯಲಿದ್ದು, 2 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಪೊಲಿಪಾಟ್, ಪಾಲ್ಕಿಂಡಿ ತಿರಿ ಉಳಿಚಲ್, ವೆಟ್ಟುಂತಡವುಂ ನಡೆಯಲಿದ್ದು, ಡಿ.31 ರಂದು ಬೆಳಿಗ್ಗೆ 5.30 ಗಂಟೆಗೆ ಅಗ್ನಿ ಕೊಂಡ ಹಾಯುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿ ಖಜಾಂಚಿ ಹರೀಶ್, ಸದಸ್ಯರುಗಳಾದ ರವಿ, ವಿಜು, ಬಸವರಾಜು, ಸುರೇಶ್ ಹಾಜರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*