Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ ಕೋಟಿ ಗೀತಾ ಲೇಖನ ಯಜ್ಞ ದೀಕ್ಷ ಕಾರ್ಯಕ್ರಮ : ಭಗವದ್ಗೀತೆ ಜಾಗತಿಕ ಹಾಗೂ ಜಾತ್ಯತೀತ ಗ್ರಂಥ : ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರು ಅಭಿಪ್ರಾಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ ಕೋಟಿ ಗೀತಾ ಲೇಖನ ಯಜ್ಞ ದೀಕ್ಷ ಕಾರ್ಯಕ್ರಮ : ಭಗವದ್ಗೀತೆ ಜಾಗತಿಕ ಹಾಗೂ ಜಾತ್ಯತೀತ ಗ್ರಂಥ : ಡಾ.ಸುಗುಣೇಂದ್ರ ತೀರ್ಥ ಶ್ರೀಪಾದರು ಅಭಿಪ್ರಾಯ

ಡಿಸೆಂಬರ್ 28, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ ಡಿ.28 :   ಭಗವದ್ಗೀತೆ ಜಾಗತಿಕ ಹಾಗೂ ಜಾತ್ಯತೀತ ಗ್ರಂಥವೆಂದು ಉಡುಪಿ ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕುಶಾಲನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಕೋಟಿ ಗೀತಾ ಲೇಖನ ಯಜ್ಞ ದೀಕ್ಷ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ, ತಾವು ಮಾಡುವ ಯಾವುದೇ ವೃತ್ತಿಯಲ್ಲಿ ಅಥವಾ ಜೀವನದಲ್ಲಿ ತೃಪ್ತಿ ಇಲ್ಲದೆ ಗೊಂದಲದಲ್ಲಿ ಸಿಲುಕಿರುವ ವೇಳೆ ಮನ ಶಾಂತಿಗಾಗಿ ಭಗವದ್ಗೀತೆ ಗ್ರಂಥ ಅಧ್ಯಯನ ಪ್ರಚಾರ ಹಾಗೂ ಬರವಣಿಗೆ ಸ್ವಯಂ ತೃಪ್ತಿ ತಂದುಕೊಡಲಿದೆ ಎಂದು ಶ್ರೀಗಳು ವ್ಯಾಖ್ಯಾನಿಸಿದರು.
ದೇಶ ವಿದೇಶಗಳಲ್ಲಿ ಭಗವದ್ಗೀತೆ ಅಭಿಯಾನ ನಡೆಯುತ್ತಿದ್ದು ವಿಶ್ವದಲ್ಲಿ ಗರಿಷ್ಠ ವ್ಯಾಖ್ಯಾನ ಹೊಂದಿರುವ ಗ್ರಂಥ ಭಗವದ್ಗೀತೆ ಪುಸ್ತಕ ವಾಗಿದ್ದು ಜಗತ್ತಿನ ಯಾವುದೇ ಗ್ರಂಥಗಳಿಗೆ ಈ ರೀತಿಯ ವ್ಯಾಖ್ಯಾನ ದೊರಕಿಲ್ಲ ಎಂದು ಶ್ರೀಗಳು ಹೇಳಿದರು.
ಜಾತಿ ಧರ್ಮ ಭೇದವಿಲ್ಲದ ಜಾಗತಿಕ ಗ್ರಂಥವಾದ ಭಗವದ್ಗೀತೆ ಜಗತ್ತಿಗೆ ಸತ್ಯವನ್ನೇ ಬೋಧಿಸಿದೆ ಎಂದರು.
ಪ್ರತಿಯೊಬ್ಬರೂ ಜೀವನದ ಉದ್ದೇಶ ಅರಿತು ಬಾಳಬೇಕು ಶ್ರೀ ಕೃಷ್ಣ ಅಂದರೆ ಭಕ್ತರಿಗೆ ವಿಶ್ವ ಬ್ಯಾಂಕ್ ಇದ್ದಂತೆ. ದೇವರಿಗೆ ಅರ್ಪಣೆ ಮಾಡುವುದು ನಮ್ಮ ಆದ್ಯ ಕರ್ತವ್ಯ. ಭಕ್ತಿ ಪ್ರೀತಿ ಸೇವೆ ವಿವಿಧ ರೂಪದಲ್ಲಿ ಅದನ್ನು ಭಗವಂತನಿಗೆ ಹಿಂತುರುಗಿಸಬಹುದು. ಕೃಷ್ಣನ ಆರಾಧನೆ ಮೂಲಕ ಅನಂತ ಫಲ ಲಭಿಸಲು ಸಾಧ್ಯ ಎಂದ ಶ್ರೀಗಳು, ಭಕ್ತಿ ಸಂಪಾದನೆ ಯಾವುದೇ ಸಂದರ್ಭ ಕಳುವಾಗಲ್ಲ. ಜೀವನವನ್ನು ದೇವರಿಗೆ ಮೀಸಲಿರಿಸಬೇಕು ಎಂದರು.
ಗೀತೆಯ ಓದಿನ ಜೊತೆಗೆ ಬರವಣಿಗೆ ಲೇಖನ ಮೂಲಕ ಶ್ರೀ ಕೃಷ್ಣನಿಗೆ ಸಮರ್ಪಣೆ ಮಾಡಬೇಕಾಗಿದೆ. ಅಭಿಯಾನದ ಮೂಲಕ ಭಗವದ್ಗೀತೆ ಪ್ರತಿಯೊಬ್ಬರ ಮನೆಯ ಪೂಜಾ ಕೊಠಡಿಯಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದರು.
ಕೊಡಗು ಜಿಲ್ಲೆಯಲ್ಲಿ ವಿಶೇಷವಾಗಿ ಭಗವದ್ಗೀತೆಯ ಬಗ್ಗೆ ಬೆಳಕು ಚೆಲ್ಲುವ ಕಾಯಕ ಕೋಟಿಗೀತಾ ಲೇಖನ ಯಜ್ಞ ಯಶಸ್ವಿ ದಾರಿಯಲ್ಲಿ ಸಾಗುತ್ತಿದ್ದು ಜನತೆಯ ಸಂಕಲ್ಪ ಈಡೇರಲು ತನ್ನ ಆಶೀರ್ವಾದ ಇದೆ ಎಂದರು.

ಸಾಕ್ಷಾತ್ ಶ್ರೀ ಮಧ್ವಾಚಾರ್ಯರೇ ಶ್ರೀ ಮಧುಪೇಂದ್ರ ತೀರ್ಥ ಪೀಠದ ಮೂಲ ಯತಿಗಳಿಗೆ ಕರುಣಿಸಿದ ಸುಮಾರು 700ಕ್ಕೂ ಅಧಿಕ ವರ್ಷಗಳ ಪುರಾತನವಾದ ಪಟ್ಟದ ದೇವರಾಗಿದ್ದುಕೊಂಡು ಪ್ರತಿನಿತ್ಯ ಪೂಜೆ ನಡೆಸಿಕೊಂಡು ಬಂದ ಶ್ರೀ ರುಕ್ಮಿಣಿ, ಸತ್ಯಭಾಮ ಸಹಿತ ಶ್ರೀ ವೀರ ವಿಠಲ ಸಪರಿವಾರ ದೇವರಿಗೆ ಶ್ರೀಗಳು ಮಹಾಪೂಜೆ ನೆರವೇರಿಸಿದರು.
2026 ರ ಪರ್ಯಾಯದ ಅವಧಿಯ ಒಳಗಾಗಿ ಕೊಡಗು ಜಿಲ್ಲೆಯಿಂದ 10800 ಸಂಖ್ಯೆಯ ಭಗವದ್ಗೀತೆ ಪುಸ್ತಕಗಳನ್ನು ಬರೆದು ಮಠಕ್ಕೆ ನೀಡುವ ಸಂಕಲ್ಪ ಹೊಂದುವ ಗುರಿ ತಮ್ಮದಾಗಿದೆ ಎಂದರು.
ಶ್ರೀಗಳ ಶಿಷ್ಯರಾದ ಶ್ರೀ ಸುಶ್ರೀoದ್ರ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿ ಭಕ್ತ ಕೋಟಿ ಎಲ್ಲರೂ ಒಂದಾಗಿ ದೇವರ ಅನುಗ್ರಹದೊಂದಿಗೆ ಪ್ರಯತ್ನ ಮೂಲಕ ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಗಳಿಸಿ ಎಂದು ಹೇಳಿದರು. ಭಗವದ್ಗೀತೆಯನ್ನು ಬರೆಯುವ ಪವಿತ್ರ ಕಾರ್ಯದೊಂದಿಗೆ ಧನ್ಯರಾಗಬಹುದು ಎಂದು ಅವರು ತಿಳಿಸಿದರು.
ಭಗವದ್ಗೀತೆಯ ಪೂರ್ಣಾವಧಿ ಪ್ರಚಾರಕರು ಸಂಕರ್ಷಣ ಪ್ರಮುಖರು ಆಗಿರುವ ವಿದ್ವಾನ್ ರಮಣ ಆಚಾರ್ಯ ಅವರು ಕೋಟಿ ಲೇಖನ ಯಜ್ಞ ಅಭಿಯಾನದ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು.
ಶ್ರೀಗಳ ಬೃಹತ್ ಜಾಗತಿಕ ಧಾರ್ಮಿಕ ಸಂಕಲ್ಪ ಕೋಟಿ ಗೀತಾ ಲೇಖನ ಯಜ್ಞ ಅಭಿಯಾನಕ್ಕೆ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ಅವರು ಕರೆ ನೀಡಿದರು.
ಕೋಟಿ ಗೀತಾ ಲೇಖನ ಯಜ್ಞ ಅಭಿಯಾನದ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಕುಶಾಲನಗರದ ಉದ್ಯಮಿ ಎಸ್ ಕೆ ಸತೀಶ್ ದಂಪತಿಗಳನ್ನು, ಮತ್ತು ಸಮಿತಿಯ ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳಿಗೆ ಶ್ರೀಗಳು ಆಶೀರ್ವದಿಸಿದರು.
ಕೋಟಿಗೀತಾ ಲೇಖನ ಯಜ್ಞ ದೀಕ್ಷಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸರ್ವರಿಗೂ ಶ್ರೀಗಳು ಪ್ರಸಾದ ಮಂತ್ರಾಕ್ಷತೆ ವಿತರಿಸಿದರು.
ಎರಡು ದಿನಗಳ ಕಾಲ ನಡೆದ ಅಭಿಯಾನ ಕಾರ್ಯಕ್ರಮದಲ್ಲಿ ಕೋಟಿಗೀತಾ ಲೇಖನ ಯಜ್ಞದ ಕೊಡಗು ಜಿಲ್ಲೆಯ ಸಮಿತಿ ಸಂಚಾಲಕರು ಹಿರಿಯ ಪತ್ರಕರ್ತರಾದ ಜಿ ಚಿದ್ವಿಲಾಸ್, ಸಮಿತಿಯ ಪ್ರಮುಖರಾದ ರಮಾ ವಿಜಯೇಂದ್ರ, ಪದ್ಮ ಪುರುಷೋತ್ತಮ್, ಜನಾರ್ದನ್ ವಸಿಷ್ಠ, ಲಕ್ಷ್ಮಿ ಮಂಜುನಾಥ್, ಯೋಗ ಗುರು ಮಧುಸೂದನ್, ಚಿ.ನಾ ಸೋಮೇಶ್, ವಿ ಡಿ ಪುಂಡರಿಕಾಕ್ಷ, ಕೆಎಸ್ ರಾಜಶೇಖರ್, ಆರ್ ಕೆ ನಾಗೇಂದ್ರ ಬಾಬು, ಕೆ ಎನ್ ದೇವರಾಜು,  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ನಿರ್ದೇಶಕಿ ಲೀಲಾವತಿ, ಮತ್ತಿತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೆಟ್ಟಳ್ಳಿಯಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ

ಅಕ್ಟೋಬರ್ 19, 2026

ಅಕ್ಟೋಬರ್ 23 ರಂದು ಪಾಲಿಬೆಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಅಕ್ಟೋಬರ್ 19, 2026

ವಿರಾಜಪೇಟೆಯಿಂದ ತಲಕಾವೇರಿವರೆಗೆ 58 ಕಿ.ಮೀ. ಪಾದಯಾತ್ರೆ; 6ನೇ ವರ್ಷದ ಯಾತ್ರೆಯಲ್ಲಿ 15 ಮಂದಿ ಭಾಗಿ – 58 ಕಿ.ಮೀ. ಭಕ್ತಿಯ ನಡಿಗೆ

ಅಕ್ಟೋಬರ್ 19, 2026

ಅಕ್ಟೋಬರ್ 23 ರಂದು ಪಾಲಿಬೆಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.19: ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿ, ಪಾಲಿಬೆಟ್ಟ ಗ್ರಾಮ ಪಂಚಾಯಿತಿ, ವಿರಾಜಪೇಟೆಯ ಸೆಂಟ್ ಆನ್ಸ್…

ವಿರಾಜಪೇಟೆಯಿಂದ ತಲಕಾವೇರಿವರೆಗೆ 58 ಕಿ.ಮೀ. ಪಾದಯಾತ್ರೆ; 6ನೇ ವರ್ಷದ ಯಾತ್ರೆಯಲ್ಲಿ 15 ಮಂದಿ ಭಾಗಿ – 58 ಕಿ.ಮೀ. ಭಕ್ತಿಯ ನಡಿಗೆ

ಅಕ್ಟೋಬರ್ 19, 2026

ರಗ್ಬಿ ಇಂಡಿಯಾ ಮಂಡಳಿಗೆ ಕೊಡಗಿನ ತಿಮ್ಮಯ್ಯ ಮಾದಂಡ ಆಯ್ಕೆ; SOM ಚುನಾವಣೆಯಲ್ಲಿ ಮಹತ್ವದ ಗೆಲುವು; ಭಾರತೀಯ ರಗ್ಬಿ ಕ್ರೀಡೆಯ ಅಭಿವೃದ್ಧಿಗೆ ಹೊಸ ಜವಾಬ್ದಾರಿ

ಅಕ್ಟೋಬರ್ 19, 2026

ಶ್ರೀ ಕಾವೇರಿ ಭಕ್ತ ಮಂಡಳಿಯಿಂದ 72ನೇ ವರ್ಷದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 19, 2026

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಾನಿಗೊಳಗಾದ ಮನೆಗೆ ಶಾಸಕ ಪೊನ್ನಣ್ಣ ಭೇಟಿ; ಸಂತ್ರಸ್ತ ಕುಟುಂಬಕ್ಕೆ ಅಗತ್ಯ ಸಾಮಗ್ರಿಗಳ ಕಿಟ್ ವಿತರಣೆ; ಸೂಕ್ತ ಪರಿಹಾರದ ಭರವಸೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.