ಮಡಿಕೇರಿ ಡಿ.28 : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯ ನೋಂದಣಿ ಪ್ರಕ್ರಿಯೆಗೆ ಈಗಾಗಲೇ ಚಾಲನೆ ದೊರೆತಿದೆ.
2023 ರಲ್ಲಿ ಪದವಿ/ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಪದವೀಧರರಿಗೆ ಪ್ರತಿ ತಿಂಗಳು 3,000 ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005999918 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ (08272-225851) ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಉಮಾ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*