ಮಡಿಕೇರಿ ಡಿ.29 : ಅತ್ಯಂತ ಸೂಕ್ಷ್ಮ ಮತ್ತು ವಿಶಿಷ್ಟ ಜನಾಂಗವಾಗಿರುವ ಕೊಡವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕನೆಕ್ಟಿಂಗ್ ಕೊಡವಾಸ್ ಟ್ರಸ್ಟ್ ಮಡಿಕೇರಿಯಲ್ಲಿ ವಿಶ್ವ ಕೊಡವ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುತ್ತಿದೆ. ಈ ರೀತಿಯ ಕೊಡವ ಸಮ್ಮೇಳನಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ವಯಂ ಪ್ರೇರಿತವಾಗಿ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಸಣ್ಣ ಸಮುದಾಯದ ಬೆಳವಣಿಗೆಗೆ ನೈತಿಕ ಬೆಂಬಲ ಸೂಚಿಸಬೇಕು ಎಂದು ಹಿರಿಯ ರಾಜಕಾರಣಿ ಬ್ರಿಜೇಶ್ ಕಾಳಪ್ಪ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶ ವಿದೇಶಗಳಲ್ಲಿ ನೆಲೆಸಿರುವ ಕೊಡವರನ್ನು ಒಗ್ಗೂಡಿಸಿ ಪಾರಂಪರಿಕ, ಸಾಂಸ್ಕೃತಿಕ, ಸಾಂಪ್ರದಾಯಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಮತ್ತು ಧಾರ್ಮಿಕ ವಿಚಾರಗಳ ಕುರಿತು ಸಮಾಲೋಚನೆ ನಡೆಸಿ ಜನಾಂಗದ ಅಭ್ಯುದಯದ ನಿಟ್ಟಿನಲ್ಲಿ ಚಿಂತನೆ ನಡೆಸಲು “ಕೊಡವ ಸಮ್ಮೇಳನ”ಗಳಂತಹ ವಿಶಿಷ್ಟ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಈ ರೀತಿಯ ಕಾರ್ಯಕ್ರಮಗಳಿಗೆ ಅನುದಾನ ನೀಡಲು ಸರ್ಕಾರಗಳೇ ಮುಂದೆ ಬರಬೇಕು ಎಂದು ತಿಳಿಸಿದ್ದಾರೆ.
ಕೊಡಗು ಅತ್ಯಂತ ಪುಟ್ಟ ಜಿಲ್ಲೆಯಾಗಿದ್ದು, ಕೇವಲ ಐದೂವರೆ ಲಕ್ಷ ಜನಸಂಖ್ಯೆ ಹೊಂದಿದೆ. ಇಲ್ಲಿನ ಮೂಲ ನಿವಾಸಿ ಕೊಡವರ ಸಂಖ್ಯೆ ಚಿಕ್ಕದಾಗಿದ್ದರೂ ರಾಜ್ಯ ಹಾಗೂ ದೇಶದ ವಿವಿಧ ಕ್ಷೇತ್ರಗಳಿಗೆ ದೊಡ್ಡ ಕೊಡುಗೆಯನ್ನೇ ನೀಡಿದ್ದಾರೆ. ಮೊದಲ ಸೇನಾ ಮಹಾದಂಡ ನಾಯಕ ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಕೊಡವರೇ ಆಗಿದ್ದಾರೆ. ಇವರುಗಳ ಸ್ಫೂರ್ತಿಯಿಂದ ಸಾವಿರಾರು ಕೊಡವರು ಸೇನಾಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ ಮತ್ತು ಸಲ್ಲಿಸುತ್ತಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ತಂಡಗಳನ್ನು ಕೊಡವ ಆಟಗಾರರು ಪ್ರತಿನಿಧಿಸಿದ್ದಾರೆ. ಸಾಹಿತ್ಯ, ಸಾಂಸ್ಕೃತಿಕ, ಸಿನಿಮಾ ಮತ್ತು ರಾಜಕೀಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆದರೆ ಕೊಡವರ ಬೆಳವಣಿಗೆಗಾಗಿ ಸರ್ಕಾರಗಳು ಹೆಚ್ಚು ಆಸಕ್ತಿ ತೋರದೆ ಇರುವುದು ವಿಪರ್ಯಾಸ.
ಕೊಡವರು ಸಣ್ಣ ಸಮುದಾಯದವರಾಗಿರುವುದರಿಂದ ರಾಜಕೀಯವಾಗಿ ದೊಡ್ಡ ಲಾಬಿ ಮಾಡಲು ಸಾಧ್ಯವಿಲ್ಲ. ಅತ್ಯಂತ ಸೂಕ್ಷ್ಮ ಸಮುದಾಯ ಮತ್ತು ಅದರ ಸಂಪ್ರದಾಯ ಉಳಿಯಬೇಕೆಂದರೆ ಆಳುವ ಸರ್ಕಾರಗಳು ವಿಶೇಷ ಆಸಕ್ತಿ ತೋರಬೇಕು. ಸಮಾಜವನ್ನು ಒಗ್ಗೂಡಿಸುವ “ಕೊಡವ ಸಮ್ಮೇಳನ” ಗಳಿಗೆ ವಿಶೇಷ ಅನುದಾನ ಘೋಷಣೆ ಮಾಡಬೇಕು. ಕೊಡವರು ಸಣ್ಣ ಸಂಖ್ಯೆಯಲ್ಲಿರುವುದರಿಂದ ಕಾರ್ಯಕ್ರಮದ ಆಯೋಜಕರು ದಾನಿಗಳ ಮೂಲಕ ದೊಡ್ಡ ಪ್ರಮಾಣದ ಆರ್ಥಿಕ ಕ್ರೋಢೀಕರಣ ಮಾಡಲು ಸಾಧ್ಯವಿಲ್ಲ.
ಕೊಡವ ಜನಾಂಗದ ಮೇಲಿನ ಕಾಳಜಿಯಿಂದ ಕೊಡವರ ಮತ್ತು ಕೊಡವ ಸಂಸ್ಕೃತಿಯ ಉಳಿವಿಗಾಗಿ ಈ ರೀತಿಯ ಸಮ್ಮೇಳನಗಳನ್ನು ಆಯೋಜಿಸುವ ಸಂಘಟನೆಗಳಿಗೆ ಸರ್ಕಾರದ ಪ್ರೋತ್ಸಾಹದ ಅಗತ್ಯವಿದೆ. ಆದ್ದರಿಂದ ವಿಶ್ವ ಕೊಡವ ಸಮ್ಮೇಳನಕ್ಕೆ ಸರ್ಕಾರ ಅನುದಾನ ನೀಡಬೇಕು ಎಂದು ಬ್ರಿಜೇಶ್ ಕಾಳಪ್ಪ ಒತ್ತಾಯಿಸಿದ್ದಾರೆ.
ವಿಶ್ವ ಕೊಡವ ಸಮ್ಮೇಳನವನ್ನು ಸಂಘಟನೆಯೊಂದು ಪ್ರತಿ ಎರಡು, ಮೂರು ವರ್ಷಕ್ಕೊಮ್ಮೆ ದೊಡ್ಡ ಮಟ್ಟದಲ್ಲಿ ನಡೆಸುವಂತ್ತಾಗಬೇಕು. ಇದರಲ್ಲಿ ಎಲ್ಲಾ ಕೊಡವ ಸಮಾಜಗಳು ಮತ್ತು ಕೊಡವ ಸಂಘಟನೆಗಳು ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಜನಪ್ರತಿನಿಧಿಗಳು ಸಮ್ಮೇಳನಕ್ಕೆ ಸರ್ಕಾರದ ಮೂಲಕ ಅನುದಾನ ಒದಗಿಸಿಕೊಡಬೇಕು ಎಂದು ಅವರು ತಿಳಿಸಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*