ಗೋಣಿಕೊಪ್ಪ ಡಿ.29 : ನಿವೃತ್ತ ಸೈನಿಕರ ಜಾಗ ಮಂಜೂರಾತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ವತಿಯಿಂದ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಅವರನ್ನು ಒತ್ತಾಯಿಸಲಾಯಿತು.
ಪೊನ್ನಂಪೇಟೆ ಆಡಳಿತ ಕಚೇರಿಯಲ್ಲಿ ತಹಶೀಲ್ದಾರ್ ಪ್ರಶಾಂತ್ ಅವರಿಗೆ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎ.ಎಸ್. ಕಟ್ಟಿ ಮಂದಯ್ಯ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಇದೇ ಸಂದರ್ಭ ತಾಲೂಕು ಆಡಳಿತ ಕಚೇರಿ ಸುತ್ತ ಬೆಳೆದು ನಿಂತಿರುವ ಗಿಡಘಂಟಿಗಳನ್ನು ತೆರವುಗೊಳಿಸಿ ಶುಚಿತ್ವದ ಕಡೆಗೂ ಗಮನ ಹರಿಸಬೇಕು ಎಂದು ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಸಲಹೆ ನೀಡಿದರು.
ಕಾರ್ಯಾಧ್ಯಕ್ಷ ಬಿ.ಎಸ್. ಕಾರ್ಯಪ್ಪ, ಕಾರ್ಯದರ್ಶಿ ಕೋಳೆರ ಸನ್ನು ಕಾವೇರಪ್ಪ, ಸಹಕಾರ್ಯದರ್ಶಿ ಕೆ.ಕೆ.ಬೆಳ್ಯಪ್ಪ, ಸದಸ್ಯ ಕಾಳಿಮಾಡ ಮುತ್ತಣ್ಣ, ಸಲಹೆಗಾರ ಚೊಟ್ಟೆಯಾಂಡಮಾಡ ವಿಶ್ವನಾಥ್ ಇದ್ದರು.