ಕುಶಾಲನಗರ ಡಿ.29 : ಕುಶಾಲನಗರ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ವಿಶ್ವ ಮಾನವ ಕುವೆಂಪು ಅವರ 120ನೇ ಜನ್ಮ ದಿನಾಚರಣೆಯನ್ನು ಕುಶಾಲನಗರದ ನಾಡ ಪ್ರಭು ಸಹಕಾರ ಸಂಘದ ಆವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಒಕ್ಕಲಿಗ ಮುಖಂಡ ವಿ.ಪಿ.ಶಶಿಧರ್, ವಿಶ್ವ ಮಾನವ ಕುವೆಂಪು ಅವರ ಜನ್ಮದಿನದಂದು ಎಲ್ಲರೂ ಅವರನ್ನು ಸ್ಮರಿಸಿಕೊಳ್ಳುವುದರ ಜೊತೆಗೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ಮಾತನಾಡಿ, ಕುವೆಂಪು ಅವರತ ಸಮಾಜಕ್ಕೆ ಬಹಳಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಇವರ ಸಾಧನೆಗಳಿಂದ ಪ್ರತಿಯೊಬ್ಬ ಕನ್ನಡಿಗನೂ ಹೆಮ್ಮೆ ಪಡುವಂತಾಗಿದೆ. ಕುವೆಂಪು ಅವರ ಜೀವನ ಶೈಲಿ, ಅವರು ನಡೆದುಬಂದ ಹಾದಿಯನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾಗಿದೆ ಎಂದರು.
ಈ ಸಂದರ್ಭ ತಾಲ್ಲೂಕು ಒಕ್ಕಲಿಗರ ಸಂಘದ ಪ್ರಮುಖರಾದ ಕೃಷ್ಣೇಗೌಡರು, ಮುಳ್ಳುಸೋಗೆ ಗ್ರಾ.ಪಂ ಮಾಜಿ ಸದಸ್ಯ ಜಿ.ಬಿ.ಜಗದೀಶ್, ಸಣ್ಣೇಗೌಡರು, ಭರತ್, ಪ್ರಕಾಶ್ ಇನ್ನಿತರರು ಹಾಜರಿದ್ದರು.








