ಮಡಿಕೇರಿ ಡಿ.30 : ಕೊಡವ ಕುಟುಂಬಗಳ ನಡುವೆ 2024ರಲ್ಲಿ ನಡೆಯಲಿರುವ ಹಾಕಿ ನಮ್ಮೆಯ ಲಾಂಛನ ಬಿಡುಗಡೆ ಸಮಾರಂಭವು ಡಿ.31 ರಂದು ನಡೆಯಲಿದೆ ಎಂದು ನಮ್ಮೆಯ ಸಂಚಾಲಕ ದಿನೇಶ್ ಕಾರ್ಯಪ್ಪ ತಿಳಿಸಿದ್ದಾರೆ.
ನಾಪೋಕ್ಲುವಿನ ಕೊಡವ ಸಮಾಜದ ಅಪ್ಪಚ್ಚಕವಿ ಸಭಾಂಗಣದಲ್ಲಿ ಬೆಳಿಗ್ಗೆ 9.30 ಗಂಟೆಗೆ ಕುಂಡ್ಯೋಳಂಡ ಕುಟುಂಬದ ಪಟ್ಟೆದಾರ ಕುಂಡ್ಯೋಳಂಡ ನಾಣಿ ನಾಣಯ್ಯ ಹಾಗೂ ಹಾಕಿ ನಮ್ಮೆಯ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಹಾಕಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಹಾಗೂ ಒಲಂಪಿಯನ್ ಡಾ.ಅಂಜಪರವಂಡ ಬಿ.ಸುಬ್ಬಯ್ಯ, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ವೆಸ್ಟ್ ಕೊಳಕೇರಿ ಗ್ರಾಮಾಭಿವೃದ್ಧಿ ಸಂಘದ ಅಧ್ಯಕ್ಷ ಕೇಟೋಳಿರ ಎಸ್.ಕುಟ್ಟಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ದಿನೇಶ್ ಕಾರ್ಯಪ್ಪ ಮಾಹಿತಿ ನೀಡಿದ್ದಾರೆ.









