Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಯೋಧ್ಯೆಯ ಮಂತ್ರಾಕ್ಷತೆ ಸ್ವೀಕರಿಸಲು ಷರತ್ತುಗಳಿಲ್ಲ, ಸೂತಕದ ಅಡ್ಡಿಯಿಲ್ಲ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಯೋಧ್ಯೆಯ ಮಂತ್ರಾಕ್ಷತೆ ಸ್ವೀಕರಿಸಲು ಷರತ್ತುಗಳಿಲ್ಲ, ಸೂತಕದ ಅಡ್ಡಿಯಿಲ್ಲ*

ಡಿಸೆಂಬರ್ 31, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.31 : ಅಯೋಧ್ಯೆಯ ಮಂತ್ರಾಕ್ಷತೆ ಸ್ವೀಕರಿಸಲು ಯಾವುದೇ ಷರತ್ತು, ನಿರ್ಬಂಧಗಳಿಲ್ಲ, ವೃತಾಚರಣೆಯ ಅಗತ್ಯವಿಲ್ಲ ಮತ್ತು ಸೂತಕದ ಅಡ್ಡಿ ಇಲ್ಲವೆಂದು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹಾಗೂ ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾ ಘಟಕ ಸ್ಪಷ್ಟಪಡಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಟ್ರಸ್ಟ್ ಮತ್ತು ವಿಹೆಚ್‌ಪಿ, ಅಯೋಧ್ಯೆಯ ಮಂತ್ರಾಕ್ಷತೆ ಸ್ವೀಕಾರದ ಕುರಿತು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿಯನ್ನು ನೀಡಿದ್ದಾರೆ. ಈ ಬಗ್ಗೆ ಯಾರೂ ಗೊಂದಲಕ್ಕೀಡಾಗದೆ ಭಕ್ತಿಯಿಂದ ಮಂತ್ರಾಕ್ಷತೆಯನ್ನು ಸ್ವೀಕರಿಸಿ ಎಂದು ಮನವಿ ಮಾಡಿದೆ.
ಮಂತ್ರಾಕ್ಷತೆ ವಿತರಿಸುವ ಸಂದರ್ಭ ಮನೆಯವರಿಂದ ಹಣ ಅಥವಾ ಯಾವುದೇ ವಸ್ತುವನ್ನು ದಾನವಾಗಿ ಪಡೆಯಬಾರದು. ಹಿರಿಯರನ್ನು ಗೌರವಿಸಬೇಕು ಮತ್ತು ಮನೆಯವರಿಗೆ ಅಕ್ಷತೆ ಬಗ್ಗೆ ಮಾಹಿತಿ ನೀಡಬೇಕು.
ಮಂತ್ರಾಕ್ಷತೆಯನ್ನು ಕೊಡಗು ಜಿಲ್ಲೆಗೆ ತಂದು ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ತಾಲ್ಲೂಕು ಮಟ್ಟದಲ್ಲಿ ವಿತರಣೆ ಮಾಡಲಾಗಿದೆ. ಪ್ರಸ್ತುತ ಗ್ರಾಮ ಗ್ರಾಮಗಳ ದೇವಾಲಯಗಳಲ್ಲಿ ಇರಿಸಲಾಗಿದ್ದು, ಜನವರಿ ಒಂದರಿoದ 15 ರವರೆಗೆ ವಿತರಣೆ ಮಾಡಲು ಸಮಯ ನಿಗದಿಪಡಿಸಲಾಗಿದೆ. ಜ.7ರಂದು ಮಹಾ ಅಭಿಯಾನದ ಮೂಲಕ ಬೆಳಗ್ಗಿನಿಂದ ಸಂಜೆಯವರೆಗೆ ಮಂತ್ರಾಕ್ಷತೆ ವಿತರಿಸಬೇಕು.
ಮಂತ್ರಾಕ್ಷತೆ ವಿತರಣೆ ಸಂದರ್ಭ ಒಂದು ತಂಡದಲ್ಲಿ ಐದು ಮಂದಿಗಿoತ ಹೆಚ್ಚು ಸದಸ್ಯರಿರಬೇಕು. ಎಲ್ಲರೂ ಬಿಳಿ ಬಣ್ಣದ ವಸ್ತ್ರವನ್ನು ತೊಡಬೇಕು ಮತ್ತು ಮಂತ್ರಾಕ್ಷತೆ ಕಳಶವನ್ನು ಹಿಡಿದವರು ಕಾಲಿಗೆ ಚಪ್ಪಲಿಗಳನ್ನು ಹಾಕಬಾರದು. ಕಾರ್ಯಕ್ರಮದಲ್ಲಿ ಮಹಿಳೆಯರು ಕೂಡ ಪಾಲ್ಗೊಳ್ಳಬೇಕು. ರಾಮನಾಮ ಜಪದೊಂದಿಗೆ ಮನೆಯೊಳಗೆ ಹೋಗಿ ತಟ್ಟೆಯಲ್ಲಿ ಎಂಟರಿoದ 10 ಗ್ರಾಂ ಅಕ್ಷತೆಯನ್ನು ನೀಡಬೇಕು. ಅಕ್ಷತೆ ವಿತರಣೆ ಮಾಡುವವರ ಬಳಿ ಒಂದು ನೋಟು ಪುಸ್ತಕ ಇರಬೇಕು. ಮನೆಯ ಯಜಮಾನನ ಹೆಸರು ಮತ್ತು ದೂರವಾಣಿ ಸಂಖ್ಯೆ, ಸದಸ್ಯರ ಸಂಖ್ಯೆಯನ್ನು ಪಡೆದುಕೊಳ್ಳಬೇಕು.
::: ಭಕ್ತರು ಹೀಗೆ ಮಾಡಿ :::
ಸ್ವೀಕರಿಸಿದ ಅಕ್ಷತೆಯನ್ನು ಮನೆಯ ಪೂಜಾ ಕ್ಷೇತ್ರದಲ್ಲಿ ಇರಿಸಬೇಕು. ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆಯ ದಿನ ಜ.22 ರಂದು ಬೆಳಿಗ್ಗೆ 10 ಗಂಟೆಗೆ ಎಲ್ಲರೂ ಅವರವರ ಗ್ರಾಮದ ದೇವಾಲಯಕ್ಕೆ ಹೋಗಿ ರಾಮನಾಮ ಜಪದೊಂದಿಗೆ ಪೂಜೆ ಸಲ್ಲಿಸಬೇಕು. ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರವನ್ನು ದೂರದರ್ಶನದ ಮೂಲಕ ದೇವಸ್ಥಾನಗಳಲ್ಲಿ ಪ್ರಸಾರ ಮಾಡಬೇಕು. ಸಂಜೆ ಸೂರ್ಯಾಸ್ತಮದ ನಂತರ ಪ್ರತಿ ಮನೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಹಣತೆಯನ್ನು ಹಚ್ಚಬೇಕು. ಆ ದಿನವನ್ನು ದೀಪಾವಳಿಯ ರೀತಿಯಲ್ಲಿ ಆಚರಣೆ ಮಾಡಬೇಕು.
ಉತ್ತರಾಭಿಮುಖವಾಗಿ ಒಂದು ದೀಪವನ್ನು ಹಿಡಿದು ಶ್ರೀರಾಮಚಂದ್ರನಿಗೆ ಆರತಿ ಬೆಳಗಬೇಕು. ಮನೆಯ ಮುಖ್ಯದ್ವಾರದ ಎದುರಿನಲ್ಲಿ ನಿಂತು ಮನೆಯ ಯಜಮಾನ ಪಡೆದುಕೊಂಡ ಅಕ್ಷತೆಯ ಕಾಳನ್ನು ಕುಟುಂಬ ಸದಸ್ಯರ ತಲೆಗೆ ಪ್ರೋಕ್ಷಣೆ ಮಾಡಬೇಕು. ನಂತರ ಸದಸ್ಯರು ಪ್ರೋಕ್ಷಣೆ ಮಾಡಿದವರ ಕಾಲು ಹಿಡಿದು ಶ್ರೀರಾಮನ ಆಶೀರ್ವಾದ ಪಡೆಯಬೇಕು. ಮಂತ್ರಾಕ್ಷತೆ ತರುವ ಕಾರ್ಯಕರ್ತರಿಗೆ ಹೂವುಗಳನ್ನು ಹಾಕಿ ಗೌರವದಿಂದ ಸ್ವಾಗತಿಸಬೇಕು ಎಂದು ಟ್ರಸ್ಟ್ ಮತ್ತು ವಿಹೆಚ್‌ಪಿ ಕೋರಿಕೊಂಡಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.