ಸೋಮವಾರಪೇಟೆ ಜ.1 : ಬೆಸೂರು ಗ್ರಾಮ ಸಭೆಯು ಜ.4 ರಂದು ಗ್ರಾ.ಪಂ
ಅಧ್ಯಕ್ಷೆ ಕಮಲಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 10.30 ಗಂಟೆಗೆ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಯಲಿರುವ ಸಭೆಯಲ್ಲಿ ನೋಡೆಲ್ ಅಧಿಕಾರಿಯಾಗಿ ಬೆಸೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶಶಿಕಲಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








