ಮಡಿಕೇರಿ ಜ.1 : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಜ.2 ಮತ್ತು 3 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಜ.2 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುವ ಕೊಡಗು ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಜ.3 ರಂದು ಸೋಮವಾರಪೇಟೆ ತಾಲ್ಲೂಕು ಕೂಡಿಗೆ ಕ್ರೀಡಾಶಾಲೆಯಲ್ಲಿ ನಡೆಯುವ 2023-24ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 17 ರ ವಯೋಮಿತಿಯ ಬಾಲಕಿಯರ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದಾರೆ.









