ಮಡಿಕೇರಿ ಜ.2 : ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜನವರಿ, 25 ರೊಳಗೆ ಸಲ್ಲಿಸಬೇಕು. ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ ಗೌರವಧನ ರೂ. 9 ಸಾವಿರ. ಎಸ್‍ಎಸ್‍ಎಲ್‍ಸಿ ಉತ್ತೀರ್ಣ/ ಅನುತ್ತೀರ್ಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ ಗೌರವಧನ ರೂ.9 ಸಾವಿರ, ಎಸ್‍ಎಸ್‍ಎಲ್‍ಸಿ ಉತ್ತೀರ್ಣ / ಅನುತ್ತೀರ್ಣ ಶೇ.40ಕ್ಕಿಂತ ಮೇಲ್ಪಟ್ಟು ಶೇ.75ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು.
ಹುದ್ದೆಗಳು ಖಾಲಿ ಇರುವ ವಿವರ: ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಯು ನಗರಸಭೆ ಮಡಿಕೇರಿ-3 ಕುಶಾಲನಗರ ಪಟ್ಟಣ ಪಂಚಾಯಿತಿ-1, ಸೋಮವಾರಪೇಟೆ ಪಟ್ಟಣ ಪಂಚಾಯಿತಿ- 1 ಮತ್ತು ವಿರಾಜಪೇಟೆ ಪಟ್ಟಣ ಪಂಚಾಯಿತಿ-1.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಯು ಮಡಿಕೇರಿ ತಾಲ್ಲೂಕಿನ ಕಡಗದಾಳು ಬಲ್ಲಮಾವಟಿ, ಬೇಂಗೂರು, ಕುಂಜಿಲ, ಕೊಣಂಜಗೇರಿ. ವಿರಾಜಪೇಟೆ ತಾಲ್ಲೂಕಿನ ದೇವರಪುರ, ನಿಟ್ಟೂರು, ನಾಲ್ಕೇರಿ, ಪೊನ್ನಪ್ಪಸಂತೆ, ಕೆ.ಬಾಡಗ, ಕಿರುಗೂರು, ಶ್ರೀಮಂಗಲ ಇಲ್ಲಿ ಹುದ್ದೆ ಖಾಲಿ ಇರುತ್ತದೆ.
ಅರ್ಜಿ ನಮೂನೆಗಳನ್ನು ಸಂಬಂಧಿಸಿದ ತಾಲ್ಲೂಕು ಪಂಚಾಯಿತಿಗಳಲ್ಲಿರುವ ಎಂಆರ್‍ಡಬ್ಲ್ಯುಗಳಿಂದ ಉಚಿತವಾಗಿ ಪಡೆದು ನಿಗದಿತ ದಿನಾಂಕದೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಕಚೇರಿಗೆ ಅಥವಾ ಎಂಆರ್‍ಡಬ್ಲ್ಯುಗಳಿಗೆ ಸಲ್ಲಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲಾ ತಿಳಿಸಿದ್ದಾರೆ.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*