ಸೋಮವಾರಪೇಟೆ ಜ.2 : ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ನಡೆದ ಪೋಷಕರ ಕ್ರೀಡಾಕೂಟದ ಮಹಿಳೆಯರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಟೀಮ್ ಹಣಕೋಡು ತಂಡ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದು, ತಾಕೇರಿ ಮಹಿಳೆಯರ ತಂಡ ದ್ವೀತಿಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ಸಂಜು ಟೀಮ್ ಪ್ರಥಮ, ಶಿವಾಜಿ ತಂಡ ದ್ವಿತೀಯ ಸ್ಥಾನ ಪಡೆಯಿತು. ಪಂದ್ಯಾವಳಿಯನ್ನು ವಿದ್ಯಾಸಂಸ್ಥೆಯ ಭಾತ್ಮೀದಾರರಾದ ಕೆ.ಎಂ.ಜಗದೀಶ್, ಪದಾಧಿಕಾರಿಗಳಾದ ರಾಮಚಂದ್ರ, ಪಿ.ಯು.ಕಾಲೇಜಿನ ಪ್ರಾಂಶುಪಾಲರಾದ ಮಿಲ್ಡ್ರೆಡ್ ಗೊನ್ಸಾಲ್ವೆಸ್, ದೈಹಿಕ ಶಿಕ್ಷಣ ಶಿಕ್ಷಕಿ ಇಂದಿರಾ ಮತ್ತು ಶಿಕ್ಷಕರುಗಳು ಇದ್ದರು.








